2 Kings · chapter 25 · verse 1
2 Kings 25:1 in Kannada
ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
Avana aalikeya ombhattane varushada hattane tingalina hattane divasadalli enaayitandare, baabelina arasanaada nebooka dnecharanu taanoo tanna ellaa sainyavoo yeroosa lemina mele bandu adakke eduraagi dandilidu adara suttaloo dinnegalannu haakidaru.
2 Kings 25:1 in English
- King James Version (KJV)
- And it came to pass in the ninth year of his reign, in the tenth month, in the tenth [day] of the month, [that] Nebuchadnezzar king of Babylon came, he, and all his host, against Jerusalem, and pitched against it; and they built forts against it round about.
- World English Bible (WEB)
- In the ninth year of his reign, in the tenth month, in the tenth day of the month, Nebuchadnezzar king of Babylon came, he and all his army, against Jerusalem, and encamped against it; and they built forts against it around it.
- American Standard Version (ASV)
- And it came to pass in the ninth year of his reign, in the tenth month, in the tenth day of the month, that Nebuchadnezzar king of Babylon came, he and all his army, against Jerusalem, and encamped against it; and they built forts against it round about.
- Bible in Basic English (BBE)
- Now in the ninth year of his rule, on the tenth day of the tenth month, Nebuchadnezzar, king of Babylon, came against Jerusalem with all his army and took up his position before it, building earthworks all round the town.
- Darby Translation (DBY)
- And it came to pass in the ninth year of his reign, in the tenth month, on the tenth of the month, [that] Nebuchadnezzar king of Babylon came, he and all his army, against Jerusalem, and encamped against it; and they built turrets against it round about.
- Webster's Bible (WBS)
- And it came to pass in the ninth year of his reign, in the tenth month, in the tenth [day] of the month, [that] Nebuchadnezzar king of Babylon came, he, and all his army, against Jerusalem, and encamped against it; and they built forts against it on all sides.
- Young's Literal Translation (YLT)
- And it cometh to pass, in the ninth year of his reign, in the tenth month, in the tenth of the month, come hath Nebuchadnezzar king of Babylon, he and all his force, against Jerusalem, and encampeth against it, and buildeth against it a fortification round about.
Read in context
- 1ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
- 2ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
- 3ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
Cross references
- Jeremiah 52:4–11 ಯೆರೆಮೀಯ 52:4–11ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Jeremiah 43:10 ಯೆರೆಮೀಯ 43:10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
- 1 Chronicles 6:15 1 ಪೂರ್ವಕಾಲವೃತ್ತಾಂತ 6:15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- Jeremiah 34:1–6 ಯೆರೆಮೀಯ 34:1–6ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ. ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ. ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
- Isaiah 29:3 ಯೆಶಾಯ 29:3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
- Jeremiah 27:8 ಯೆರೆಮೀಯ 27:8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Jeremiah 32:28 ಯೆರೆಮೀಯ 32:28ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
- 2 Chronicles 36:17–21 2 ಪೂರ್ವಕಾಲವೃತ್ತಾಂತ 36:17–21ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Ezekiel 21:22–24 ಯೆಹೆಜ್ಕೇಲನು 21:22–24ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ. ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- Daniel 4:1–18 ದಾನಿಯೇಲನು 4:1–18ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು. ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ; ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು. ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು. ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ-- ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು. ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು. ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು. ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ. ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ. ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು. ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು. ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
- 2 Kings 24:1 2 ಅರಸುಗಳು 24:1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
Original words (Hebrew)
- ninth · H8671תְּשִׁיעִי tᵉshîyʻîy
- year · H8141שָׁנֶה shâneh
- reign · H4427מָלַךְ mâlak
- tenth · H6224עֲשִׂירִי ʻăsîyrîy
- month · H2320חֹדֶשׁ chôdesh
- tenth · H6218עָשׂוֹר ʻâsôwr
- month · H2320חֹדֶשׁ chôdesh
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- came · H935בּוֹא bôwʼ
- host · H2428חַיִל chayil
- Jerusalem · H3389יְרוּשָׁלַ͏ִם Yᵉrûwshâlaim
- pitched · H2583חָנָה chânâh
- built · H1129בָּנָה bânâh
- forts · H1785דָּיֵק dâyêq
- about · H5439סָבִיב çâbîyb