2 Kings · chapter 25 · verse 10
2 Kings 25:10 in Kannada
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
Kaavalugaarara adhipatiya sangadadallidda kasdeeyara sainyadavare llaroo yeroosalemina suttaloo iruva gode galannu kedavibittaru.
2 Kings 25:10 in English
- King James Version (KJV)
- And all the army of the Chaldees, that [were with] the captain of the guard, brake down the walls of Jerusalem round about.
- World English Bible (WEB)
- All the army of the Chaldeans, who were with the captain of the guard, broke down the walls around Jerusalem.
- American Standard Version (ASV)
- And all the army of the Chaldeans, that were [with] the captain of the guard, brake down the walls of Jerusalem round about.
- Bible in Basic English (BBE)
- And the walls round Jerusalem were broken down by the Chaldaean army which was with the captain.
- Darby Translation (DBY)
- And all the army of the Chaldeans that were with the captain of the body-guard broke down the walls of Jerusalem round about.
- Webster's Bible (WBS)
- And all the army of the Chaldees, that [were with] the captain of the guard, broke down the walls of Jerusalem on all sides.
- Young's Literal Translation (YLT)
- and the walls of Jerusalem round about have all the forces of the Chaldeans, who [are] with the chief of the executioners, broken down.
Read in context
- 8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
- 9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- 10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- 11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- 12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
Cross references
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- Jeremiah 52:14–23 ಯೆರೆಮೀಯ 52:14–23ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು. ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.