2 Kings · chapter 25 · verse 13
2 Kings 25:13 in Kannada
ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
Idallade kartana maneyallidda hittaale stambhagalannoo aadhaaragalannoo kartana maneyallidda hittaale samudravemba paatre yannoo kasdeeyaru odedu haaki adara hittaale yannu baabelige oydaru.
2 Kings 25:13 in English
- King James Version (KJV)
- And the pillars of brass that [were] in the house of the LORD, and the bases, and the brasen sea that [was] in the house of the LORD, did the Chaldees break in pieces, and carried the brass of them to Babylon.
- World English Bible (WEB)
- The Chaldeans broke up the pillars of bronze that were in the LORD’s house and the bases and the bronze sea that were in the LORD’s house, and carried the bronze pieces to Babylon.
- American Standard Version (ASV)
- And the pillars of brass that were in the house of Jehovah, and the bases and the brazen sea that were in the house of Jehovah, did the Chaldeans break in pieces, and carried the brass of them to Babylon.
- Bible in Basic English (BBE)
- And the brass pillars in the house of the Lord, and the wheeled bases, and the great brass water-vessel in the house of the Lord, were broken up by the Chaldaeans, who took the brass to Babylon.
- Darby Translation (DBY)
- And the brazen pillars that were in the house of Jehovah, and the bases, and the brazen sea that was in the house of Jehovah, the Chaldeans broke in pieces, and carried the brass thereof to Babylon.
- Webster's Bible (WBS)
- And the pillars of brass that [were] in the house of the LORD, and the bases, and the brazen sea that [was] in the house of the LORD, did the Chaldees break in pieces, and carried the brass of them to Babylon.
- Young's Literal Translation (YLT)
- And the pillars of brass that [are] in the house of Jehovah, and the bases, and the sea of brass, that [is] in the house of Jehovah, have the Chaldeans broken in pieces, and bear away their brass to Babylon.
Read in context
- 11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- 12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- 13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- 14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
- 15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
Cross references
- 2 Chronicles 36:18 2 ಪೂರ್ವಕಾಲವೃತ್ತಾಂತ 36:18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- 1 Kings 7:15 1 ಅರಸುಗಳು 7:15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- 2 Kings 20:17 2 ಅರಸುಗಳು 20:17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
- Jeremiah 52:17–20 ಯೆರೆಮೀಯ 52:17–20ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- 1 Kings 7:23–45 1 ಅರಸುಗಳು 7:23–45ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು. ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು. ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು. ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು. ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು. ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು. ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು. ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು. ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು. ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು. ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು. ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು. ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು. ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು. ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು. ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- Jeremiah 27:19–22 ಯೆರೆಮೀಯ 27:19–22ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ-- ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- 2 Chronicles 4:12–16 2 ಪೂರ್ವಕಾಲವೃತ್ತಾಂತ 4:12–16ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
- Exodus 27:3 ವಿಮೋಚನಕಾಂಡ 27:3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- 2 Chronicles 4:2–6 2 ಪೂರ್ವಕಾಲವೃತ್ತಾಂತ 4:2–6ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು, ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು. ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
Original words (Hebrew)
- pillars · H5982עַמּוּד ʻammûwd
- brass · H5178נְחֹשֶׁת nᵉchôsheth
- house · H1004בַּיִת bayith
- bases · H4350מְכוֹנָה mᵉkôwnâh
- brasen · H5178נְחֹשֶׁת nᵉchôsheth
- sea · H3220יָם yâm
- house · H1004בַּיִת bayith
- Chaldees · H3778כַּשְׂדִּי Kasdîy
- pieces · H7665שָׁבַר shâbar
- carried · H5375נָשָׂא nâsâʼ
- brass · H5178נְחֹשֶׁת nᵉchôsheth
- Babylon · H894בָּבֶל Bâbel