2 Kings · chapter 3 · verse 12
2 Kings 3:12 in Kannada
ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
Israaye lina arasanoo yehoshaaphaatanoo edomina arasanoo avana balige ilidu hodaru.
2 Kings 3:12 in English
- King James Version (KJV)
- And Jehoshaphat said, The word of the LORD is with him. So the king of Israel and Jehoshaphat and the king of Edom went down to him.
- World English Bible (WEB)
- Jehoshaphat said, “The LORD’s word is with him.” So the king of Israel and Jehoshaphat and the king of Edom went down to him.
- American Standard Version (ASV)
- And Jehoshaphat said, The word of Jehovah is with him. So the king of Israel and Jehoshaphat and the king of Edom went down to him.
- Bible in Basic English (BBE)
- And Jehoshaphat said, The word of the Lord is with him. So the king of Israel and Jehoshaphat and the king of Edom went down to him.
- Darby Translation (DBY)
- And Jehoshaphat said, The word of Jehovah is with him. And the king of Israel and Jehoshaphat and the king of Edom went down to him.
- Webster's Bible (WBS)
- And Jehoshaphat said, The word of the LORD is with him. So the king of Israel and Jehoshaphat and the king of Edom went down to him.
- Young's Literal Translation (YLT)
- And Jehoshaphat saith, 'The word of Jehovah is with him;' and go down unto him do the king of Israel, and Jehoshaphat, and the king of Edom.
Read in context
- 10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
- 11ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
- 12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
- 13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- 14ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
Cross references
- 1 Samuel 3:19–21 1 ಸಮುವೇಲನು 3:19–21ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ. ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು. ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- 2 Kings 2:21 2 ಅರಸುಗಳು 2:21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 2 Kings 2:24–25 2 ಅರಸುಗಳು 2:24–25ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು. ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
- 2 Kings 5:15 2 ಅರಸುಗಳು 5:15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
- 2 Kings 5:8–9 2 ಅರಸುಗಳು 5:8–9ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು. ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
- 2 Kings 2:14–15 2 ಅರಸುಗಳು 2:14–15ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು. ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.