2 Kings · chapter 5 · verse 25
2 Kings 5:25 in Kannada
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
Aaga ivanu olage praveshisi tanna yajamaanana munde nintanu. Eleeshanu avanige--gehajiye, ellinda bandi andanu. Adakkavanu--ninna sevakanu elligoo hogalilla andanu.
2 Kings 5:25 in English
- King James Version (KJV)
- But he went in, and stood before his master. And Elisha said unto him, Whence [comest thou], Gehazi? And he said, Thy servant went no whither.
- World English Bible (WEB)
- But he went in, and stood before his master. Elisha said to him, “Where did you come from, Gehazi?” He said, “Your servant went nowhere.”
- American Standard Version (ASV)
- But he went in, and stood before his master. And Elisha said unto him, Whence comest thou, Gehazi? And he said, Thy servant went no whither.
- Bible in Basic English (BBE)
- Then he came in and took his place before his master. And Elisha said to him, Where have you come from, Gehazi? And he said, Your servant went nowhere.
- Darby Translation (DBY)
- And he entered in and stood before his master. And Elisha said to him, Whence [comest thou], Gehazi? And he said, Thy servant went no whither.
- Webster's Bible (WBS)
- But he went in, and stood before his master: and Elisha said to him, Whence [comest thou] Gehazi? and he said, Thy servant went no whither.
- Young's Literal Translation (YLT)
- And he hath come in, and doth stand by his lord, and Elisha saith unto him, 'Whence — Gehazi?' and he saith, 'Thy servant went not hither or thither.'
Read in context
- 23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
- 24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
- 25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
- 26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Cross references
- 2 Kings 5:22 2 ಅರಸುಗಳು 5:22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
- Matthew 26:21 ಮತ್ತಾಯನು 26:21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Genesis 3:8–9 ಆದಿಕಾಂಡ 3:8–9ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
- 2 Kings 20:14 2 ಅರಸುಗಳು 20:14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
- Genesis 4:9 ಆದಿಕಾಂಡ 4:9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- John 13:26–30 ಯೋಹಾನನು 13:26–30ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು. ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು. ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು. ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- Matthew 26:15–16 ಮತ್ತಾಯನು 26:15–16ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- Proverbs 30:20 ಜ್ಞಾನೋಕ್ತಿಗಳು 30:20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- Acts 5:3–4 ಅಪೊಸ್ತಲರ ಕೃತ್ಯಗಳು 5:3–4ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.