2 Kings · chapter 6 · verse 13
2 Kings 6:13 in Kannada
ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
Aaga avanu--naanu kaluhisi avanannu hidiyuva haage neenu hogi avanu elliddaano nodiri andanu. Aaga igo, dotaaninalliddaanendu avanige tilisidaru.
2 Kings 6:13 in English
- King James Version (KJV)
- And he said, Go and spy where he [is], that I may send and fetch him. And it was told him, saying, Behold, [he is] in Dothan.
- World English Bible (WEB)
- He said, “Go and see where he is, that I may send and get him.” He was told, “Behold, he is in Dothan.”
- American Standard Version (ASV)
- And he said, Go and see where he is, that I may send and fetch him. And it was told him, saying, Behold, he is in Dothan.
- Bible in Basic English (BBE)
- Then he said, Go and see where he is, so that I may send and get him. And news came to him that he was in Dothan.
- Darby Translation (DBY)
- And he said, Go and see where he is, and I will send and fetch him. And it was told him saying, Behold, he is in Dothan.
- Webster's Bible (WBS)
- And he said, Go, and spy where he [is] , that I may send and bring him. And it was told him, saying, Behold, [he is] in Dothan.
- Young's Literal Translation (YLT)
- And he saith, 'Go ye and see where he [is], and I send and take him;' and it is declared to him, saying, 'Lo — in Dothan.'
Read in context
- 11ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
- 12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- 13ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
- 14ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
- 15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
Cross references
- Genesis 37:17 ಆದಿಕಾಂಡ 37:17ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Psalm 37:12–14 ಕೀರ್ತನೆಗಳು 37:12–14ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ. ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- Matthew 2:4–8 ಮತ್ತಾಯನು 2:4–8ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- 1 Samuel 23:22–23 1 ಸಮುವೇಲನು 23:22–23ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- Psalm 10:8–10 ಕೀರ್ತನೆಗಳು 10:8–10ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- Acts 23:12–27 ಅಪೊಸ್ತಲರ ಕೃತ್ಯಗಳು 23:12–27ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು. ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ, ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು. ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:- ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.