2 Kings · chapter 6 · verse 28
2 Kings 6:28 in Kannada
ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
Arasanu avalige--ninna duhkha venu andanu. Adakkavalu--ee streeyu nanage heliddenandare--ee hottu naavu ninna maganannu tinnuva haage avanannu kodu; naale nanna maganannu tinnona andalu.
2 Kings 6:28 in English
- King James Version (KJV)
- And the king said unto her, What aileth thee? And she answered, This woman said unto me, Give thy son, that we may eat him to day, and we will eat my son to morrow.
- World English Bible (WEB)
- Then the king asked her, “What is your problem?” She answered, “This woman said to me, ‘Give your son, that we may eat him today, and we will eat my son tomorrow.’
- American Standard Version (ASV)
- And the king said unto her, What aileth thee? And she answered, This woman said unto me, Give thy son, that we may eat him to-day, and we will eat my son to-morrow.
- Bible in Basic English (BBE)
- And the king said to her, What is troubling you? And she said in answer, This woman said to me, Give your son to be our food today, and we will have my son tomorrow.
- Darby Translation (DBY)
- And the king said to her, What aileth thee? And she said, This woman said to me, Give thy son, that we may eat him to-day, and we will eat my son to-morrow.
- Webster's Bible (WBS)
- And the king said to her, What aileth thee? and she answered, This woman said to me, Give thy son, that we may eat him to-day, and we will eat my son to-morrow.
- Young's Literal Translation (YLT)
- And the king saith to her, 'What — to thee?' and she saith, 'This woman said unto me, Give thy son, and we eat him to-day, and my son we eat to-morrow;
Read in context
- 26ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
- 27ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
- 28ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
- 29ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 30ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
Cross references
- 2 Samuel 14:5 2 ಸಮುವೇಲನು 14:5ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.
- Luke 23:29 ಲೂಕನು 23:29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- Judges 18:23 ನ್ಯಾಯಸ್ಥಾಪಕರು 18:23ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Isaiah 22:1 ಯೆಶಾಯ 22:1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
- Genesis 21:17 ಆದಿಕಾಂಡ 21:17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Isaiah 9:20–21 ಯೆಶಾಯ 9:20–21ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Psalm 114:5 ಕೀರ್ತನೆಗಳು 114:5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- Deuteronomy 28:53–57 ಧರ್ಮೋಪದೇಶಕಾಂಡ 28:53–57ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.