2 Peter · chapter 1 · verse 7
2 Peter 1:7 in Kannada
ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
Bhaktige sahodara karuneyannoo sahodara karunege preetiyannoo koodisiri.
2 Peter 1:7 in English
- King James Version (KJV)
- And to godliness brotherly kindness; and to brotherly kindness charity.
- World English Bible (WEB)
- and in godliness, brotherly affection; and in brotherly affection, love.
- American Standard Version (ASV)
- and in [your] godliness brotherly kindness; and in [your] brotherly kindness love.
- Bible in Basic English (BBE)
- And love of the brothers to fear of God, and to love of the brothers, love itself.
- Darby Translation (DBY)
- in godliness brotherly love, in brotherly love love:
- Webster's Bible (WBS)
- And to godliness brotherly kindness; and to brotherly kindness charity.
- Young's Literal Translation (YLT)
- and in the piety the brotherly kindness, and in the brotherly kindness the love;
Read in context
- 5ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
- 6ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
- 7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- 8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- 9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
Cross references
- Hebrews 13:1 ಇಬ್ರಿಯರಿಗೆ 13:1ಸಹೋದರ ಪ್ರೀತಿಯು ನೆಲೆಯಾಗಿರಲಿ.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 1 Thessalonians 3:12 1 ಥೆಸಲೊನೀಕದವರಿಗೆ 3:12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- Colossians 3:14 ಕೊಲೊಸ್ಸೆಯವರಿಗೆ 3:14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 1 Corinthians 13:1–8 1 ಕೊರಿಂಥದವರಿಗೆ 13:1–8ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.