2 Peter · chapter 1 · verse 9
2 Peter 1:9 in Kannada
ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
Ivugalilladavanu kurudanaagiddaane; avanu dooradrushtiyilladavanaagiddu tanna hindana paapagalinda shuddhanaadaddannu maretubittiddaane.
2 Peter 1:9 in English
- King James Version (KJV)
- But he that lacketh these things is blind, and cannot see afar off, and hath forgotten that he was purged from his old sins.
- World English Bible (WEB)
- For he who lacks these things is blind, seeing only what is near, having forgotten the cleansing from his old sins.
- American Standard Version (ASV)
- For he that lacketh these things is blind, seeing only what is near, having forgotten the cleansing from his old sins.
- Bible in Basic English (BBE)
- For the man who has not these things is blind, seeing only what is near, having no memory of how he was made clean from his old sins.
- Darby Translation (DBY)
- for he with whom these things are not present is blind, short-sighted, and has forgotten the purging of his former sins.
- Webster's Bible (WBS)
- But he that lacketh these things is blind, and cannot see afar off, and hath forgotten that he was purified from his old sins.
- Young's Literal Translation (YLT)
- for he with whom these things are not present is blind, dim-sighted, having become forgetful of the cleansing of his old sins;
Read in context
- 7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- 8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- 9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- 10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- 11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
Cross references
- 1 John 2:9–11 1 ಯೋಹಾನನು 2:9–11ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- 2 Peter 2:18–20 2 ಪೇತ್ರನು 2:18–20ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- James 2:14–26 ಯಾಕೋಬನು 2:14–26ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Ephesians 5:26 ಎಫೆಸದವರಿಗೆ 5:26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- Romans 6:1–4 ರೋಮಾಪುರದವರಿಗೆ 6:1–4ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ? ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- Romans 6:11 ರೋಮಾಪುರದವರಿಗೆ 6:11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- 2 Peter 1:4–7 2 ಪೇತ್ರನು 1:4–7ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
Original words (Greek)
- But · G1063γάρ gár
- that · G3739ὅς hós
- lacketh · G3918πάρειμι páreimi
- things · G5023ταῦτα taûta
- is · G2076ἐστί estí
- blind · G5185τυφλός typhlós
- off · G3467μυωπάζω myōpázō
- hath · G2983λαμβάνω lambánō
- forgotten · G3024λήθη lḗthē
- purged · G2512καθαρισμός katharismós
- from · G266ἁμαρτία hamartía
- his · G846αὐτός autós
- old · G3819πάλαι pálai
- sins · G266ἁμαρτία hamartía