2 Samuel · chapter 10 · verse 13
2 Samuel 10:13 in Kannada
ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.
Aaga yovaabanoo avana sangada idda janaroo araamyara mele yuddha maaduvadakke saviాpakke bandaru. Avaru avana edurininda odihodaru.
2 Samuel 10:13 in English
- King James Version (KJV)
- And Joab drew nigh, and the people that [were] with him, unto the battle against the Syrians: and they fled before him.
- World English Bible (WEB)
- So Joab and the people who were with him came near to the battle against the Syrians, and they fled before him.
- American Standard Version (ASV)
- So Joab and the people that were with him drew nigh unto the battle against the Syrians: and they fled before him.
- Bible in Basic English (BBE)
- Then Joab and the people with him went forward to the fight against the Aramaeans, and they went in flight before him.
- Darby Translation (DBY)
- And Joab drew near, and the people that were with him, unto the battle against the Syrians; and they fled before him.
- Webster's Bible (WBS)
- And Joab and the people that [were] with him drew near to the battle against the Syrians: and they fled before him.
- Young's Literal Translation (YLT)
- And Joab draweth nigh, and the people who [are] with him, to battle against Aram, and they flee from his presence;
Read in context
- 11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
- 12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- 13ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.
- 14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
- 15ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
Cross references
- 1 Kings 20:13–21 1 ಅರಸುಗಳು 20:13–21ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು. ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು. ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು. ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು. ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು. ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು. ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು. ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
- 1 Chronicles 19:14–15 1 ಪೂರ್ವಕಾಲವೃತ್ತಾಂತ 19:14–15ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು. ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
- 1 Kings 20:28–30 1 ಅರಸುಗಳು 20:28–30ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು. ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು. ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 2 Chronicles 13:5–16 2 ಪೂರ್ವಕಾಲವೃತ್ತಾಂತ 13:5–16ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ? ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ. ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ. ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು. ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು. ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ. ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು. ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು. ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು. ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.