2 Samuel · chapter 10 · verse 7
2 Samuel 10:7 in Kannada
ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
Daaveedanu adannu kelidaaga avanu yovaabanannoo paraa kramashaaligalaada sakala shoorasainikarannu kaluhi sidanu.
2 Samuel 10:7 in English
- King James Version (KJV)
- And when David heard of [it], he sent Joab, and all the host of the mighty men.
- World English Bible (WEB)
- When David heard of it, he sent Joab and all the army of the mighty men.
- American Standard Version (ASV)
- And when David heard of it, he sent Joab, and all the host of the mighty men.
- Bible in Basic English (BBE)
- And hearing of this, David sent Joab and all the army and the best fighting-men.
- Darby Translation (DBY)
- And David heard [of it], and he sent Joab, and all the host, the mighty men.
- Webster's Bible (WBS)
- And when David heard of [it] , he sent Joab, and all the host of the mighty men.
- Young's Literal Translation (YLT)
- and David heareth, and sendeth Joab, and all the host — the mighty men.
Read in context
- 5ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
- 6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
- 8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 9ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
Cross references
- 1 Chronicles 19:8–19 1 ಪೂರ್ವಕಾಲವೃತ್ತಾಂತ 19:8–19ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು. ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು. ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು. ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ-- ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು, ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು. ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು. ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು. ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು. ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
- 2 Samuel 23:8–39 2 ಸಮುವೇಲನು 23:8–39ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು. ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು. ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು. ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು. ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು. ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ. ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು. ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು. ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್ ಊರಿನ ದೋದೋವಿನ ಮಗನಾದ ಎಲ್ಹಾನಾನು; ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್, ತೆಕೋವಿಯನಾದ ಇಕ್ಕೇಷನ ಮಗನಾದ ಈರಾ. ಅಣತೋತಿನವನಾದ ಅಬೀ ಯೆಜರ್, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್, ನೆಟೋಫದ ವನಾದ ಮಹರೈ, ನೆಟೋಫದವನಾದ ಬಾಣನ ಮಗ ಹೆಲೇಬ್, ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ, ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು, ಹರಾರ್ಯನಾದ ಶಮ್ಮನು, ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು, ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್, ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ, ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು. ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.