2 Samuel · chapter 12 · verse 1
2 Samuel 12:1 in Kannada
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
Kartanu naataananannu daaveedana balige kaluhisidanu. Avanu avana balige bandu heliddenandare--ondu pattanadalli ibbaru manushyariddaru; obbanu aishvaryavantanu, mattobbanu badavanu.
2 Samuel 12:1 in English
- King James Version (KJV)
- And the LORD sent Nathan unto David. And he came unto him, and said unto him, There were two men in one city; the one rich, and the other poor.
- World English Bible (WEB)
- The LORD sent Nathan to David. He came to him, and said to him, “There were two men in one city: the one rich, and the other poor.
- American Standard Version (ASV)
- And Jehovah sent Nathan unto David. And he came unto him, and said unto him, There were two men in one city; the one rich, and the other poor.
- Bible in Basic English (BBE)
- And the Lord sent Nathan to David. And Nathan came to him and said, There were two men in the same town: one a man of great wealth, and the other a poor man.
- Darby Translation (DBY)
- And Jehovah sent Nathan to David. And he came to him, and said to him, There were two men in one city; the one rich, and the other poor.
- Webster's Bible (WBS)
- And the LORD sent Nathan to David. And he came to him, and said to him, There were two men in one city; the one rich, and the other poor.
- Young's Literal Translation (YLT)
- And Jehovah sendeth Nathan unto David, and he cometh unto him, and saith to him: 'Two men have been in one city; One rich and one poor;
Read in context
- 1ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
- 2ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.
- 3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
Cross references
- Psalm 51:1–19 ಕೀರ್ತನೆಗಳು 51:1–19ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು. ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು. ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು. ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು. ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ. ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು. ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- 1 Kings 20:35–41 1 ಅರಸುಗಳು 20:35–41ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು. ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು. ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು. ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು. ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು. ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು. ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
- 2 Samuel 11:10–17 2 ಸಮುವೇಲನು 11:10–17ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- 2 Kings 1:3 2 ಅರಸುಗಳು 1:3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- Judges 9:7–15 ನ್ಯಾಯಸ್ಥಾಪಕರು 9:7–15ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ. ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು. ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
- Isaiah 57:17–18 ಯೆಶಾಯ 57:17–18ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- 2 Samuel 14:5–11 2 ಸಮುವೇಲನು 14:5–11ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ. ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು. ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು. ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು. ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 2 Samuel 24:11–13 2 ಸಮುವೇಲನು 24:11–13ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ-- ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- Luke 15:11–32 ಲೂಕನು 15:11–32ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು. ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು. ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು. ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು. ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು. ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Original words (Hebrew)
- sent · H7971שָׁלַח shâlach
- Nathan · H5416נָתָן Nâthân
- David · H1732דָּוִד Dâvid
- came · H935בּוֹא bôwʼ
- said · H559אָמַר ʼâmar
- two · H8147שְׁנַיִם shᵉnayim
- men · H582אֱנוֹשׁ ʼĕnôwsh
- one · H259אֶחָד ʼechâd
- city · H5892עִיר ʻîyr
- one · H259אֶחָד ʼechâd
- rich · H6223עָשִׁיר ʻâshîyr
- other · H259אֶחָד ʼechâd
- poor · H7326רוּשׁ rûwsh