2 Samuel · chapter 16 · verse 20
2 Samuel 16:20 in Kannada
ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
Aaga abshaalomanu aheetophelanige--naavu maadabekaadaddannu neenu yochane maadi helu andanu.
2 Samuel 16:20 in English
- King James Version (KJV)
- Then said Absalom to Ahithophel, Give counsel among you what we shall do.
- World English Bible (WEB)
- Then Absalom said to Ahithophel, “Give your counsel what we shall do.”
- American Standard Version (ASV)
- Then said Absalom to Ahithophel, Give your counsel what we shall do.
- Bible in Basic English (BBE)
- Then Absalom said to Ahithophel, Give your opinion now, what are we to do?
- Darby Translation (DBY)
- And Absalom said to Ahithophel, Give counsel among you what we shall do.
- Webster's Bible (WBS)
- Then said Absalom to Ahithophel, Give counsel among you what we shall do.
- Young's Literal Translation (YLT)
- And Absalom saith unto Ahithophel, 'Give for you counsel what we do.'
Read in context
- 18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
- 19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
- 21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
- 22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
Cross references
- Exodus 1:10 ವಿಮೋಚನಕಾಂಡ 1:10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
- Acts 4:23–28 ಅಪೊಸ್ತಲರ ಕೃತ್ಯಗಳು 4:23–28ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು. ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Psalm 37:12–13 ಕೀರ್ತನೆಗಳು 37:12–13ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.