2 Samuel · chapter 16 · verse 5
2 Samuel 16:5 in Kannada
ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
Arasanaada daaveedanu bahureemina varegoo bandaaga igo, saulana gotradavanaadantha gerana maganaada shimmiyemba hesarulla obba manushyanu allinda horatu dooshisuttaa nadedu bandanu.
2 Samuel 16:5 in English
- King James Version (KJV)
- And when king David came to Bahurim, behold, thence came out a man of the family of the house of Saul, whose name [was] Shimei, the son of Gera: he came forth, and cursed still as he came.
- World English Bible (WEB)
- When King David came to Bahurim, behold, a man of the family of Saul’s house came out, whose name was Shimei, the son of Gera. He came out and cursed as he came.
- American Standard Version (ASV)
- And when king David came to Bahurim, behold, there came out thence a man of the family of the house of Saul, whose name was Shimei, the son of Gera; he came out, and cursed still as he came.
- Bible in Basic English (BBE)
- And when King David came to Bahurim, a man of Saul's family named Shimei, the son of Gera, came out from there, calling curses after him.
- Darby Translation (DBY)
- And when king David came to Bahurim, behold, there came out from thence a man of the family of the house of Saul, whose name was Shimei, the son of Gera: he came forth, and cursed,
- Webster's Bible (WBS)
- And when king David came to Bahurim, behold, thence came out a man of the family of the house of Saul, whose name [was] Shimei, the son of Gera: he came forth, and cursed still as he came.
- Young's Literal Translation (YLT)
- And king David hath come in unto Bahurim, and lo, thence a man is coming out, of the family of the house of Saul, and his name [is] Shimei, son of Gera, he cometh out, coming out and reviling;
Read in context
- 3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
- 7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
Cross references
- 2 Samuel 3:16 2 ಸಮುವೇಲನು 3:16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
- 1 Kings 2:8–9 1 ಅರಸುಗಳು 2:8–9ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು. ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
- 1 Samuel 17:43 1 ಸಮುವೇಲನು 17:43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 1 Kings 2:36–46 1 ಅರಸುಗಳು 2:36–46ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು. ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು. ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು. ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು. ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು. ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ? ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು. ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು. ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 2 Samuel 17:18 2 ಸಮುವೇಲನು 17:18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Psalm 69:26 ಕೀರ್ತನೆಗಳು 69:26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- Psalm 109:16–19 ಕೀರ್ತನೆಗಳು 109:16–19ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
- Ecclesiastes 10:20 ಪ್ರಸಂಗಿ 10:20ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- 2 Samuel 19:16–23 2 ಸಮುವೇಲನು 19:16–23ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು. ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು. ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ-- ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ. ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು. ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು. ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು. ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
- Proverbs 26:2 ಜ್ಞಾನೋಕ್ತಿಗಳು 26:2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
Original words (Hebrew)
- king · H4428מֶלֶךְ melek
- David · H1732דָּוִד Dâvid
- came · H935בּוֹא bôwʼ
- Bahurim · H980בַּחֻרִים Bachurîym
- out · H3318יָצָא yâtsâʼ
- man · H376אִישׁ ʼîysh
- family · H4940מִשְׁפָּחָה mishpâchâh
- house · H1004בַּיִת bayith
- Saul · H7586שָׁאוּל Shâʼûwl
- name · H8034שֵׁם shêm
- Shimei · H8096שִׁמְעִי Shimʻîy
- son · H1121בֵּן bên
- Gera · H1617גֵּרָא Gêrâʼ
- forth · H3318יָצָא yâtsâʼ
- cursed · H7043קָלַל qâlal
- came · H3318יָצָא yâtsâʼ