2 Samuel · chapter 17 · verse 10
2 Samuel 17:10 in Kannada
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
Aaga sinhada hrudayavulla paraakramashaaliya hrudayavoo saha sampoorna karaguvadu. Idallade ninna tandeyu shooranendoo avana sangada iruvavaru paraa kramashaaligalendoo israayelyarellaru ballaru.
2 Samuel 17:10 in English
- King James Version (KJV)
- And he also [that is] valiant, whose heart [is] as the heart of a lion, shall utterly melt: for all Israel knoweth that thy father [is] a mighty man, and [they] which [be] with him [are] valiant men.
- World English Bible (WEB)
- Even he who is valiant, whose heart is as the heart of a lion, will utterly melt; for all Israel knows that your father is a mighty man, and those who are with him are valiant men.
- American Standard Version (ASV)
- And even he that is valiant, whose heart is as the heart of a lion, will utterly melt; for all Israel knoweth that thy father is a mighty man, and they that are with him are valiant men.
- Bible in Basic English (BBE)
- Then even the strongest, whose heart is like the heart of a lion, will become like water; for all Israel is conscious that your father is a man of war, and those who are with him are strong and without fear.
- Darby Translation (DBY)
- and even the valiant man whose heart is as the heart of a lion shall utterly melt; for all Israel knows that thy father is a mighty man, and they that are with him are valiant men.
- Webster's Bible (WBS)
- And he also [that is] valiant, whose heart [is] as the heart of a lion, will utterly melt: for all Israel knoweth that thy father [is] a mighty man, and [they] who [are] with him [are] valiant men.
- Young's Literal Translation (YLT)
- and he also, the son of valour, whose heart [is] as the heart of the lion, doth utterly melt, for all Israel doth know that thy father is a hero, and sons of valour [are] those with him.
Read in context
- 8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- 9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
- 10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
- 11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
- 12ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
Cross references
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- 2 Samuel 1:23 2 ಸಮುವೇಲನು 1:23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
- Numbers 24:8–9 ಅರಣ್ಯಕಾಂಡ 24:8–9ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು. ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- Song of Solomon 3:7 ಪರಮಗೀತೆ 3:7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
- Hebrews 11:34 ಇಬ್ರಿಯರಿಗೆ 11:34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- 2 Samuel 23:20 2 ಸಮುವೇಲನು 23:20ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Genesis 49:9 ಆದಿಕಾಂಡ 49:9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Isaiah 13:7 ಯೆಶಾಯ 13:7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.