2 Samuel · chapter 18 · verse 19
2 Samuel 18:19 in Kannada
ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
Aaga chaadokana maganaada aheemaachanukartanu raajana shatrugala mele hege nyaaya teerisiddaanemba vartamaanagalannu arasanige tili suva haage naanu odihoguvadakke appaneyaaga beku andanu.
2 Samuel 18:19 in English
- King James Version (KJV)
- Then said Ahimaaz the son of Zadok, Let me now run, and bear the king tidings, how that the LORD hath avenged him of his enemies.
- World English Bible (WEB)
- Then Ahimaaz the son of Zadok said, “Let me now run and carry the king news, how the LORD has avenged him of his enemies.”
- American Standard Version (ASV)
- Then said Ahimaaz the son of Zadok, Let me now run, and bear the king tidings, how that Jehovah hath avenged him of his enemies.
- Bible in Basic English (BBE)
- Then Ahimaaz, the son of Zadok, said, Let me go and give the king news of how the Lord has done right in his cause against those who took up arms against him.
- Darby Translation (DBY)
- And Ahimaaz the son of Zadok said, Let me run, I pray, and carry the king the news that Jehovah has avenged him of his enemies.
- Webster's Bible (WBS)
- Then said Ahimaaz the son of Zadok, Let me now run, and inform the king, how the LORD hath avenged himself of his enemies.
- Young's Literal Translation (YLT)
- And Ahimaaz son of Zadok said, 'Let me run, I pray thee, and I bear the king tidings, for Jehovah hath delivered him out of the hand of his enemies;'
Read in context
- 17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- 18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- 19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- 20ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
- 21ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
Cross references
- 2 Samuel 15:36 2 ಸಮುವೇಲನು 15:36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- 2 Samuel 18:31 2 ಸಮುವೇಲನು 18:31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
- Psalm 7:8–9 ಕೀರ್ತನೆಗಳು 7:8–9ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Psalm 10:18 ಕೀರ್ತನೆಗಳು 10:18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 10:14 ಕೀರ್ತನೆಗಳು 10:14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- 2 Samuel 18:23 2 ಸಮುವೇಲನು 18:23ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 2 Samuel 18:27–29 2 ಸಮುವೇಲನು 18:27–29ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು. ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು. ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
- 2 Samuel 17:17 2 ಸಮುವೇಲನು 17:17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- Psalm 9:4 ಕೀರ್ತನೆಗಳು 9:4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.