2 Samuel · chapter 22 · verse 11
2 Samuel 22:11 in Kannada
ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
Aatanu keroobiya mele kootu haaridanu, gaaliya rekkegala mele kaanisi kondanu.
2 Samuel 22:11 in English
- King James Version (KJV)
- And he rode upon a cherub, and did fly: and he was seen upon the wings of the wind.
- World English Bible (WEB)
- He rode on a cherub, and flew. Yes, he was seen on the wings of the wind.
- American Standard Version (ASV)
- And he rode upon a cherub, and did fly; Yea, he was seen upon the wings of the wind.
- Bible in Basic English (BBE)
- And he went through the air, seated on a storm-cloud: going quickly on the wings of the wind.
- Darby Translation (DBY)
- And he rode upon a cherub, and did fly; And he was seen upon the wings of the wind.
- Webster's Bible (WBS)
- And he rode upon a cherub, and flew: and he was seen upon the wings of the wind.
- Young's Literal Translation (YLT)
- And He rideth on a cherub, and doth fly, And is seen on the wings of the wind.
Read in context
- 9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- 10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
- 11ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
- 12ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
- 13ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
Cross references
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Ezekiel 10:2–14 ಯೆಹೆಜ್ಕೇಲನು 10:2–14ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
- Psalm 68:17 ಕೀರ್ತನೆಗಳು 68:17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- Exodus 25:19 ವಿಮೋಚನಕಾಂಡ 25:19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
- Ezekiel 9:3 ಯೆಹೆಜ್ಕೇಲನು 9:3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Psalm 139:9 ಕೀರ್ತನೆಗಳು 139:9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ