2 Samuel · chapter 22 · verse 16
2 Samuel 22:16 in Kannada
ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
Minchannu kaluhisi avarannu galibili maadi danu. Aaga kartana gadarikeyindaloo aatana moogina shvaasada gaaliyindaloo samudrada nele galu kaanalpattavu; bhoolokada astivaaragalu bailaadavu.
2 Samuel 22:16 in English
- King James Version (KJV)
- And the channels of the sea appeared, the foundations of the world were discovered, at the rebuking of the LORD, at the blast of the breath of his nostrils.
- World English Bible (WEB)
- Then the channels of the sea appeared. The foundations of the world were laid bare by the LORD’s rebuke, at the blast of the breath of his nostrils.
- American Standard Version (ASV)
- Then the channels of the sea appeared, The foundations of the world were laid bare, By the rebuke of Jehovah, At the blast of the breath of his nostrils.
- Bible in Basic English (BBE)
- Then the deep beds of the sea were seen, and the bases of the world were uncovered, because of the Lord's wrath, because of the breath of his mouth.
- Darby Translation (DBY)
- And the beds of the sea were seen, The foundations of the world were uncovered At the rebuke of Jehovah, At the blast of the breath of his nostrils.
- Webster's Bible (WBS)
- And the channels of the sea appeared, the foundations of the world were laid open, at the rebuking of the LORD, at the blast of the breath of his nostrils.
- Young's Literal Translation (YLT)
- And seen are the streams of the sea, Revealed are foundations of the world, By the rebuke of Jehovah, From the breath of the spirit of His anger.
Read in context
- 14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
- 15ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
- 16ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
- 17ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
- 18ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;
Cross references
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Exodus 15:8–10 ವಿಮೋಚನಕಾಂಡ 15:8–10ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Habakkuk 3:8–10 ಹಬಕ್ಕೂಕ 3:8–10ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Psalm 114:3–7 ಕೀರ್ತನೆಗಳು 114:3–7ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Job 38:11 ಯೋಬನು 38:11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 18:15–17 ಕೀರ್ತನೆಗಳು 18:15–17ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು. ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು. ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
- Exodus 14:21–27 ವಿಮೋಚನಕಾಂಡ 14:21–27ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
- Psalm 106:9 ಕೀರ್ತನೆಗಳು 106:9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
- Matthew 8:26–27 ಮತ್ತಾಯನು 8:26–27ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- 2 Samuel 22:9 2 ಸಮುವೇಲನು 22:9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.