2 Samuel · chapter 22 · verse 28
2 Samuel 22:28 in Kannada
ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
Neenu deenarannu rakshisuvi; garvigalannu taggisuva haage ninna kannugalu avara mele ave.
2 Samuel 22:28 in English
- King James Version (KJV)
- And the afflicted people thou wilt save: but thine eyes [are] upon the haughty, [that] thou mayest bring [them] down.
- World English Bible (WEB)
- You will save the afflicted people, but your eyes are on the arrogant, that you may bring them down.
- American Standard Version (ASV)
- And the afflicted people thou wilt save; But thine eyes are upon the haughty, that thou mayest bring them down.
- Bible in Basic English (BBE)
- For you are the saviour of those who are in trouble; but your eyes are on men of pride, to make them low.
- Darby Translation (DBY)
- And the afflicted people thou dost save; And thine eyes are upon the haughty, [whom] thou bringest down.
- Webster's Bible (WBS)
- And the afflicted people thou wilt save: but thy eyes [are] upon the haughty, [that] thou mayest bring [them] down.
- Young's Literal Translation (YLT)
- And the poor people Thou dost save, And Thine eyes on the high causest to fall.
Read in context
- 26ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- 27ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
- 28ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
- 29ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
- 30ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
Cross references
- Psalm 72:12–13 ಕೀರ್ತನೆಗಳು 72:12–13ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
- Isaiah 5:15 ಯೆಶಾಯ 5:15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- James 4:6–7 ಯಾಕೋಬನು 4:6–7ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Exodus 3:7–8 ವಿಮೋಚನಕಾಂಡ 3:7–8ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Isaiah 37:28–29 ಯೆಶಾಯ 37:28–29ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- 1 Peter 5:5–6 1 ಪೇತ್ರನು 5:5–6ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.