2 Samuel · chapter 22 · verse 5
2 Samuel 22:5 in Kannada
ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
Maranadalegalu nannannu aavarisikondavu; bhaktiheenara pravaahagalu nannannu hedarisidavu;
2 Samuel 22:5 in English
- King James Version (KJV)
- When the waves of death compassed me, the floods of ungodly men made me afraid;
- World English Bible (WEB)
- For the waves of death surrounded me. The floods of ungodliness made me afraid.
- American Standard Version (ASV)
- For the waves of death compassed me; The floods of ungodliness made me afraid:
- Bible in Basic English (BBE)
- For the waves of death came round me, and the seas of evil put me in fear;
- Darby Translation (DBY)
- For the waves of death encompassed me, Torrents of Belial made me afraid.
- Webster's Bible (WBS)
- When the waves of death compassed me, the floods of ungodly-men made me afraid;
- Young's Literal Translation (YLT)
- When the breakers of death compassed me, The streams of the worthless terrify me,
Read in context
- 3ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- 4ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- 5ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
- 6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
- 7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
Cross references
- Jonah 2:3 ಯೋನ 2:3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
- Psalm 69:14–15 ಕೀರ್ತನೆಗಳು 69:14–15ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Jeremiah 46:7–8 ಯೆರೆಮೀಯ 46:7–8ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Isaiah 59:19 ಯೆಶಾಯ 59:19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- Psalm 18:4 ಕೀರ್ತನೆಗಳು 18:4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- Revelation 17:1 ಪ್ರಕಟನೆ 17:1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- Revelation 12:15–16 ಪ್ರಕಟನೆ 12:15–16ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.