2 Samuel · chapter 23 · verse 39
2 Samuel 23:39 in Kannada
ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
Hittiyanaada ooreeyanu iva rellaa moovattelu mandiyu.
2 Samuel 23:39 in English
- King James Version (KJV)
- Uriah the Hittite: thirty and seven in all.
- World English Bible (WEB)
- and Uriah the Hittite: thirty-seven in all.
- American Standard Version (ASV)
- Uriah the Hittite: thirty and seven in all.
- Bible in Basic English (BBE)
- Uriah the Hittite: thirty-seven in number.
- Darby Translation (DBY)
- Uriah the Hittite: thirty-seven in all.
- Webster's Bible (WBS)
- Uriah the Hittite: thirty and seven in all.
- Young's Literal Translation (YLT)
- Uriah the Hittite; in all thirty and seven.
Read in context
- 37ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ,
- 38ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
- 39ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
Cross references
- 2 Samuel 11:3 2 ಸಮುವೇಲನು 11:3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- Matthew 1:6 ಮತ್ತಾಯನು 1:6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 2 Samuel 11:6–27 2 ಸಮುವೇಲನು 11:6–27ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು. ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು. ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು. ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು. ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು. ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು. ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು. ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು. ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು. ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು. ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- 1 Chronicles 11:41 1 ಪೂರ್ವಕಾಲವೃತ್ತಾಂತ 11:41ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು,