2 Samuel · chapter 24 · verse 1
2 Samuel 24:1 in Kannada
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
Kartana kopavu tirigi israayelige virodhavaagi uriyitu; aaga israa yelannoo yehoodavannoo lekkisalu hogendu aatanu daaveedanannu prerepisidanu.
2 Samuel 24:1 in English
- King James Version (KJV)
- And again the anger of the LORD was kindled against Israel, and he moved David against them to say, Go, number Israel and Judah.
- World English Bible (WEB)
- Again the LORD’s anger burned against Israel, and he moved David against them, saying, “Go, count Israel and Judah.”
- American Standard Version (ASV)
- And again the anger of Jehovah was kindled against Israel, and he moved David against them, saying, Go, number Israel and Judah.
- Bible in Basic English (BBE)
- Again the wrath of the Lord was burning against Israel, and moving David against them, he said, Go, take the number of Israel and Judah.
- Darby Translation (DBY)
- And again the anger of Jehovah was kindled against Israel, and he moved David against them saying, Go, number Israel and Judah.
- Webster's Bible (WBS)
- And again the anger of the LORD was kindled against Israel, and he moved David against them to say, Go number Israel and Judah.
- Young's Literal Translation (YLT)
- And the anger of Jehovah addeth to burn against Israel, and [an adversary] moveth David about them, saying, 'Go, number Israel and Judah.'
Read in context
- 1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
- 2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
- 3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
Cross references
- 1 Chronicles 21:1 1 ಪೂರ್ವಕಾಲವೃತ್ತಾಂತ 21:1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
- 1 Chronicles 27:23–24 1 ಪೂರ್ವಕಾಲವೃತ್ತಾಂತ 27:23–24ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- James 1:13–14 ಯಾಕೋಬನು 1:13–14ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 1 Kings 22:20–23 1 ಅರಸುಗಳು 22:20–23ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Exodus 7:3 ವಿಮೋಚನಕಾಂಡ 7:3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Ezekiel 20:25 ಯೆಹೆಜ್ಕೇಲನು 20:25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Genesis 45:5 ಆದಿಕಾಂಡ 45:5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.