2 Samuel · chapter 24 · verse 14
2 Samuel 24:14 in Kannada
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
Aaga daaveedanu gaadanige--naanu bahu ikkattinalliddene. Eega kartana kaiyalli beeluvevu; yaakandare aatana karuneyu bahalavaagide; manushyara kaiyalli beelenu andanu.
2 Samuel 24:14 in English
- King James Version (KJV)
- And David said unto Gad, I am in a great strait: let us fall now into the hand of the LORD; for his mercies [are] great: and let me not fall into the hand of man.
- World English Bible (WEB)
- David said to Gad, “I am in distress. Let us fall now into the LORD’s hand, for his mercies are great. Let me not fall into man’s hand.”
- American Standard Version (ASV)
- And David said unto Gad, I am in a great strait: let us fall now into the hand of Jehovah; for his mercies are great; and let me not fall into the hand of man.
- Bible in Basic English (BBE)
- And David said to Gad, This is a hard decision for me to make: let us come into the hands of the Lord, for great are his mercies: let me not come into the hands of men.
- Darby Translation (DBY)
- And David said to Gad, I am in a great strait: let us fall, I pray thee, into the hand of Jehovah; for his mercies are great; but let me not fall into the hand of man.
- Webster's Bible (WBS)
- And David said to Gad, I am in a great strait: let us fall now into the hand of the LORD; for his mercies [are] great: and let me not fall into the hand of man.
- Young's Literal Translation (YLT)
- And David saith unto Gad, 'I have great distress, let us fall, I pray thee, into the hand of Jehovah, for many [are] His mercies, and into the hand of man let me not fall.'
Read in context
- 12ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
- 13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- 14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- 15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
- 16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
Cross references
- Psalm 119:156 ಕೀರ್ತನೆಗಳು 119:156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- 1 Chronicles 21:13 1 ಪೂರ್ವಕಾಲವೃತ್ತಾಂತ 21:13ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- Psalm 145:9 ಕೀರ್ತನೆಗಳು 145:9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 103:8–14 ಕೀರ್ತನೆಗಳು 103:8–14ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- Psalm 106:41–42 ಕೀರ್ತನೆಗಳು 106:41–42ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Psalm 130:4 ಕೀರ್ತನೆಗಳು 130:4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- 2 Kings 6:15 2 ಅರಸುಗಳು 6:15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.