2 Samuel · chapter 5 · verse 21
2 Samuel 5:21 in Kannada
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
Alli philishtiyaru tamma vigrahagalannu bittuhodadarinda daaveedanoo avana janaroo avugalannu suttubittaru.
2 Samuel 5:21 in English
- King James Version (KJV)
- And there they left their images, and David and his men burned them.
- World English Bible (WEB)
- They left their images there, and David and his men took them away.
- American Standard Version (ASV)
- And they left their images there; and David and his men took them away.
- Bible in Basic English (BBE)
- And the Philistines, when they went in flight, did not take their images with them, and David and his men took them away.
- Darby Translation (DBY)
- And they left their images there, and David and his men took them away.
- Webster's Bible (WBS)
- And there they left their images, and David and his men burned them.
- Young's Literal Translation (YLT)
- And they forsake there their idols, and David and his men lift them up.
Read in context
- 19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 20ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
- 21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- 22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
Cross references
- 1 Chronicles 14:11–12 1 ಪೂರ್ವಕಾಲವೃತ್ತಾಂತ 14:11–12ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು. ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Jeremiah 43:12 ಯೆರೆಮೀಯ 43:12ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Deuteronomy 7:25 ಧರ್ಮೋಪದೇಶಕಾಂಡ 7:25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Isaiah 37:19 ಯೆಶಾಯ 37:19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Isaiah 46:1–2 ಯೆಶಾಯ 46:1–2ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- 1 Samuel 5:2–6 1 ಸಮುವೇಲನು 5:2–6ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು. ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ. ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.