2 Samuel · chapter 6 · verse 1
2 Samuel 6:1 in Kannada
ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
Daaveedanu israayelinalli aayalpatta moovattu saavira janarannu koodisi kondu eddu tanna sangada idda ellaa janarannu karakondu
2 Samuel 6:1 in English
- King James Version (KJV)
- Again, David gathered together all [the] chosen [men] of Israel, thirty thousand.
- World English Bible (WEB)
- David again gathered together all the chosen men of Israel, thirty thousand.
- American Standard Version (ASV)
- And David again gathered together all the chosen men of Israel, thirty thousand.
- Bible in Basic English (BBE)
- And David got together all the fighting-men of Israel to the number of thirty thousand;
- Darby Translation (DBY)
- And David again gathered all the chosen men of Israel, thirty thousand.
- Webster's Bible (WBS)
- Again, David assembled all [the] chosen [men] of Israel, thirty thousand,
- Young's Literal Translation (YLT)
- And David gathered again every chosen one in Israel, thirty thousand,
Read in context
- 1ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
- 2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
- 3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
Cross references
- 1 Chronicles 13:1–4 1 ಪೂರ್ವಕಾಲವೃತ್ತಾಂತ 13:1–4ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು. ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
- 1 Kings 8:1 1 ಅರಸುಗಳು 8:1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
- 1 Chronicles 13:6–14 1 ಪೂರ್ವಕಾಲವೃತ್ತಾಂತ 13:6–14ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು. ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು. ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು. ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು. ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು. ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು. ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- Psalm 132:1–6 ಕೀರ್ತನೆಗಳು 132:1–6ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ. ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ-- ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು; ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು. ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.