2 Thessalonians · chapter 1 · verse 9
2 Thessalonians 1:9 in Kannada
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
Anthavaru kartana saanidhyadindaloo balavulla aatana mahimeyindaloo nitya naashanavemba shikshe yannu honduvaru.
2 Thessalonians 1:9 in English
- King James Version (KJV)
- Who shall be punished with everlasting destruction from the presence of the Lord, and from the glory of his power;
- World English Bible (WEB)
- who will pay the penalty: eternal destruction from the face of the Lord and from the glory of his might,
- American Standard Version (ASV)
- who shall suffer punishment, [even] eternal destruction from the face of the Lord and from the glory of his might,
- Bible in Basic English (BBE)
- Whose reward will be eternal destruction from the face of the Lord and from the glory of his strength,
- Darby Translation (DBY)
- who shall pay the penalty [of] everlasting destruction from [the] presence of the Lord, and from the glory of his might,
- Webster's Bible (WBS)
- Who shall be punished with everlasting destruction from the presence of the Lord, and from the glory of his power;
- Young's Literal Translation (YLT)
- who shall suffer justice — destruction age-during — from the face of the Lord, and from the glory of his strength,
Read in context
- 7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- 8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- 10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Cross references
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Luke 13:27 ಲೂಕನು 13:27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Revelation 20:14 ಪ್ರಕಟನೆ 20:14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.