2 Timothy · chapter 2 · verse 11
2 Timothy 2:11 in Kannada
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
Idu nambatakka ddaagide, enendare--naavu aatanodane sattiddare aatanodane naavu saha jeevisuvevu.
2 Timothy 2:11 in English
- King James Version (KJV)
- [It is] a faithful saying: For if we be dead with [him], we shall also live with [him]:
- World English Bible (WEB)
- This saying is trustworthy: “For if we died with him, we will also live with him.
- American Standard Version (ASV)
- Faithful is the saying: For if we died with him, we shall also live with him:
- Bible in Basic English (BBE)
- This is a true saying: If we undergo death with him, then will we be living with him:
- Darby Translation (DBY)
- The word [is] faithful; for if we have died together with [him], we shall also live together;
- Webster's Bible (WBS)
- [It is] a faithful saying: For if we are dead with [him] , we shall also live with [him] :
- Young's Literal Translation (YLT)
- Stedfast [is] the word: For if we died together — we also shall live together;
Read in context
- 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- 10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
- 12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- 13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
Cross references
- Romans 6:8 ರೋಮಾಪುರದವರಿಗೆ 6:8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Romans 6:5 ರೋಮಾಪುರದವರಿಗೆ 6:5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- 2 Corinthians 4:10 2 ಕೊರಿಂಥದವರಿಗೆ 4:10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
- Galatians 2:19–20 ಗಲಾತ್ಯದವರಿಗೆ 2:19–20ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- 1 Timothy 3:1 1 ತಿಮೊಥೆಯನಿಗೆ 3:1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.