2 Timothy · chapter 2 · verse 15
2 Timothy 2:15 in Kannada
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
Neenu devarige yogyanaagi kaanisikolluvadakke abhyaasisu. Avamaanakke guri yaagada kelasadavanoo satyavaakyavannu sariyaagi vibhaagisuvavanoo aagiru.
2 Timothy 2:15 in English
- King James Version (KJV)
- Study to shew thyself approved unto God, a workman that needeth not to be ashamed, rightly dividing the word of truth.
- World English Bible (WEB)
- Give diligence to present yourself approved by God, a workman who doesn’t need to be ashamed, properly handling the Word of Truth.
- American Standard Version (ASV)
- Give diligence to present thyself approved unto God, a workman that needeth not to be ashamed, handling aright the word of truth.
- Bible in Basic English (BBE)
- Let it be your care to get the approval of God, as a workman who has no cause for shame, giving the true word in the right way.
- Darby Translation (DBY)
- Strive diligently to present thyself approved to God, a workman that has not to be ashamed, cutting in a straight line the word of truth.
- Webster's Bible (WBS)
- Study to show thyself approved to God, a workman that needeth not to be ashamed, rightly dividing the word of truth.
- Young's Literal Translation (YLT)
- be diligent to present thyself approved to God — a workman irreproachable, rightly dividing the word of the truth;
Read in context
- 13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- 14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- 15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- 16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
Cross references
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- 1 Timothy 4:6 1 ತಿಮೊಥೆಯನಿಗೆ 4:6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 2 Corinthians 10:18 2 ಕೊರಿಂಥದವರಿಗೆ 10:18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- 2 Corinthians 5:9 2 ಕೊರಿಂಥದವರಿಗೆ 5:9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- 1 Timothy 4:12–16 1 ತಿಮೊಥೆಯನಿಗೆ 4:12–16ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು. ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು. ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 2 Peter 1:15 2 ಪೇತ್ರನು 1:15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Hebrews 5:11–14 ಇಬ್ರಿಯರಿಗೆ 5:11–14ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Original words (Greek)
- Study · G4704σπουδάζω spoudázō
- shew · G3936παρίστημι parístēmi
- thyself · G4572σεαυτοῦ seautoû
- approved · G1384δόκιμος dókimos
- God · G2316θεός theós
- workman · G2040ἐργάτης ergátēs
- ashamed · G422ἀνεπαίσχυντος anepaíschyntos
- dividing · G3718ὀρθοτομέω orthotoméō
- word · G3056λόγος lógos
- truth · G225ἀλήθεια alḗtheia