2 Timothy · chapter 2 · verse 6
2 Timothy 2:6 in Kannada
ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
Prayaasa paduva vyavasaayagaaranu phalagalalli modalaneya daagi paalugaaranaagiratakkaddu.
2 Timothy 2:6 in English
- King James Version (KJV)
- The husbandman that laboureth must be first partaker of the fruits.
- World English Bible (WEB)
- The farmer who labors must be the first to get a share of the crops.
- American Standard Version (ASV)
- The husbandman that laboreth must be the first to partake of the fruits.
- Bible in Basic English (BBE)
- It is right for the worker in the fields to be the first to take of the fruit.
- Darby Translation (DBY)
- The husbandman must labour before partaking of the fruits.
- Webster's Bible (WBS)
- The husbandman that laboreth must be first partaker of the fruits.
- Young's Literal Translation (YLT)
- the labouring husbandman it behoveth first of the fruits to partake;
Read in context
- 4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- 7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
- 8ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
Cross references
- Hebrews 10:36 ಇಬ್ರಿಯರಿಗೆ 10:36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- 1 Corinthians 9:7–11 1 ಕೊರಿಂಥದವರಿಗೆ 9:7–11ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- 1 Corinthians 3:6–9 1 ಕೊರಿಂಥದವರಿಗೆ 3:6–9ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- 1 Corinthians 9:23 1 ಕೊರಿಂಥದವರಿಗೆ 9:23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Luke 10:2 ಲೂಕನು 10:2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- Matthew 9:37–38 ಮತ್ತಾಯನು 9:37–38ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು. ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- John 4:35–38 ಯೋಹಾನನು 4:35–38ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ. ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು. ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ. ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
- Isaiah 28:24–26 ಯೆಶಾಯ 28:24–26ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ? ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Matthew 21:33–41 ಮತ್ತಾಯನು 21:33–41ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Matthew 20:1 ಮತ್ತಾಯನು 20:1ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.