2 Timothy · chapter 3 · verse 1
2 Timothy 3:1 in Kannada
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
Aadare kade divasagalalli apaayakara vaada kaalagalu baruvavembadannu saha tiliduko.
2 Timothy 3:1 in English
- King James Version (KJV)
- This know also, that in the last days perilous times shall come.
- World English Bible (WEB)
- But know this: that in the last days, grievous times will come.
- American Standard Version (ASV)
- But know this, that in the last days grievous times shall come.
- Bible in Basic English (BBE)
- But be certain of this, that in the last days times of trouble will come.
- Darby Translation (DBY)
- But this know, that in [the] last days difficult times shall be there;
- Webster's Bible (WBS)
- This know also, that in the last days perilous times will come.
- Young's Literal Translation (YLT)
- And this know thou, that in the last days there shall come perilous times,
Read in context
- 1ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
- 2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- 3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
Cross references
- 2 Peter 3:3 2 ಪೇತ್ರನು 3:3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- 2 Thessalonians 2:3–12 2 ಥೆಸಲೊನೀಕದವರಿಗೆ 2:3–12ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Jude 1:17 ಯೂದನು 1:17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Jeremiah 49:39 ಯೆರೆಮೀಯ 49:39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Daniel 12:11 ದಾನಿಯೇಲನು 12:11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- Revelation 8:1–13 ಪ್ರಕಟನೆ 8:1–13ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು. ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು. ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು. ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು. ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು. ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು; ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು. ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.