2 Timothy · chapter 3 · verse 12
2 Timothy 3:12 in Kannada
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
Haudu, krista yesuvinalli bhakti yullavaraagi jeevisuvadakke manassu maaduvava rellaroo hinsegolagaaguvaru.
2 Timothy 3:12 in English
- King James Version (KJV)
- Yea, and all that will live godly in Christ Jesus shall suffer persecution.
- World English Bible (WEB)
- Yes, and all who desire to live godly in Christ Jesus will suffer persecution.
- American Standard Version (ASV)
- Yea, and all that would live godly in Christ Jesus shall suffer persecution.
- Bible in Basic English (BBE)
- Yes, and all whose purpose is to be living in the knowledge of God in Christ Jesus, will be cruelly attacked.
- Darby Translation (DBY)
- And all indeed who desire to live piously in Christ Jesus will be persecuted.
- Webster's Bible (WBS)
- And all indeed that will live godly in Christ Jesus will suffer persecution.
- Young's Literal Translation (YLT)
- and all also who will to live piously in Christ Jesus shall be persecuted,
Read in context
- 10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- 11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- 12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- 13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- 14ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
Cross references
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- 1 Peter 4:12–16 1 ಪೇತ್ರನು 4:12–16ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 1 Peter 2:20–21 1 ಪೇತ್ರನು 2:20–21ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Matthew 5:10–12 ಮತ್ತಾಯನು 5:10–12ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- 1 Peter 5:9–10 1 ಪೇತ್ರನು 5:9–10ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ. ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- John 15:19–21 ಯೋಹಾನನು 15:19–21ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Psalm 37:12–15 ಕೀರ್ತನೆಗಳು 37:12–15ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ. ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- Mark 10:30 ಮಾರ್ಕನು 10:30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.