2 Timothy · chapter 3 · verse 5
2 Timothy 3:5 in Kannada
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
Bhaktiya veshaviddu adara balavannu allagaleyuvavaroo aagiruvaru; inthavarinda pratyekavaagiru.
2 Timothy 3:5 in English
- King James Version (KJV)
- Having a form of godliness, but denying the power thereof: from such turn away.
- World English Bible (WEB)
- holding a form of godliness but having denied its power. Turn away from these, also.
- American Standard Version (ASV)
- holding a form of godliness, but having denied the power thereof: from these also turn away.
- Bible in Basic English (BBE)
- Having a form of religion, but turning their backs on the power of it: go not with these.
- Darby Translation (DBY)
- having a form of piety but denying the power of it: and from these turn away.
- Webster's Bible (WBS)
- Having a form of godliness, but denying its power: from such turn away.
- Young's Literal Translation (YLT)
- having a form of piety, and its power having denied; and from these be turning away,
Read in context
- 3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- 4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
- 5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- 6ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
- 7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
Cross references
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Matthew 23:27–28 ಮತ್ತಾಯನು 23:27–28ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Romans 2:20–24 ರೋಮಾಪುರದವರಿಗೆ 2:20–24ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- Ezekiel 33:30–32 ಯೆಹೆಜ್ಕೇಲನು 33:30–32ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ. ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Romans 16:17–18 ರೋಮಾಪುರದವರಿಗೆ 16:17–18ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 2 Timothy 2:16 2 ತಿಮೊಥೆಯನಿಗೆ 2:16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 2 John 1:10–12 2 ಯೋಹಾನನು 1:10–12ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- 2 Timothy 2:23 2 ತಿಮೊಥೆಯನಿಗೆ 2:23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.