3 John · chapter 1 · verse 4
3 John 1:4 in Kannada
ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
Nanna makkalu satyavannanusarisi nadeyuvavaraagiddaarendu keluva dakkinta hechchaada santoshavu nanagilla.
3 John 1:4 in English
- King James Version (KJV)
- I have no greater joy than to hear that my children walk in truth.
- World English Bible (WEB)
- I have no greater joy than this: to hear about my children walking in truth.
- American Standard Version (ASV)
- Greater joy have I none than this, to hear of my children walking in the truth.
- Bible in Basic English (BBE)
- I have no greater joy than to have news that my children are walking in the true way.
- Darby Translation (DBY)
- I have no greater joy than these things that I hear of my children walking in the truth.
- Webster's Bible (WBS)
- I have no greater joy than to hear that my children walk in truth.
- Young's Literal Translation (YLT)
- greater than these things I have no joy, that I may hear of my children in truth walking.
Read in context
- 2ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
- 3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- 4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- 6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
Cross references
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 2 Timothy 1:2 2 ತಿಮೊಥೆಯನಿಗೆ 1:2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- Proverbs 23:24 ಜ್ಞಾನೋಕ್ತಿಗಳು 23:24ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- 1 Kings 3:6 1 ಅರಸುಗಳು 3:6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
- Philemon 1:10 ಫಿಲೆಮೋನನಿಗೆ 1:10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Psalm 26:1–3 ಕೀರ್ತನೆಗಳು 26:1–3ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ. ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು. ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.