3 John · chapter 1 · verse 6
3 John 1:6 in Kannada
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
Avaru sabheya munde ninna preetige saakshi helidaru. Avarannu neenu bhaktipoorvakavaagi saaga kaluhisidare neenu olledu maaduttee.
3 John 1:6 in English
- King James Version (KJV)
- Which have borne witness of thy charity before the church: whom if thou bring forward on their journey after a godly sort, thou shalt do well:
- World English Bible (WEB)
- They have testified about your love before the assembly. You will do well to send them forward on their journey in a way worthy of God,
- American Standard Version (ASV)
- who bare witness to thy love before the church: whom thou wilt do well to set forward on their journey worthily of God:
- Bible in Basic English (BBE)
- Who have given witness to the church of your love for them: and you will do well to send them on their way well cared for, as is right for servants of God:
- Darby Translation (DBY)
- (who have witnessed of thy love before [the] assembly,) in setting forward whom on their journey worthily of God, thou wilt do well;
- Webster's Bible (WBS)
- Who have borne testimony of thy charity before the church: whom if thou shalt bring forward on their journey after a godly sort, thou wilt do well:
- Young's Literal Translation (YLT)
- who did testify of thy love before an assembly, whom thou wilt do well, having sent forward worthily of God,
Read in context
- 4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- 6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- 7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
- 8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
Cross references
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- Titus 3:13 ತೀತನಿಗೆ 3:13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Philemon 1:5–7 ಫಿಲೆಮೋನನಿಗೆ 1:5–7ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Romans 15:24 ರೋಮಾಪುರದವರಿಗೆ 15:24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- Philippians 4:14 ಫಿಲಿಪ್ಪಿಯವರಿಗೆ 4:14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- 2 Corinthians 1:16 2 ಕೊರಿಂಥದವರಿಗೆ 1:16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
- Matthew 25:21–23 ಮತ್ತಾಯನು 25:21–23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.