3 John · chapter 1 · verse 7
3 John 1:7 in Kannada
ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
Yaakandare avaru aatana hesarina nimittavaagi horatu hogiddaare; anyajanagalinda enoo tegedukolluvavaralla.
3 John 1:7 in English
- King James Version (KJV)
- Because that for his name’s sake they went forth, taking nothing of the Gentiles.
- World English Bible (WEB)
- because for the sake of the Name they went out, taking nothing from the Gentiles.
- American Standard Version (ASV)
- because that for the sake of the Name they went forth, taking nothing of the Gentiles.
- Bible in Basic English (BBE)
- For they went out for love of the Name, taking nothing from the Gentiles.
- Darby Translation (DBY)
- for for the name have they gone forth, taking nothing of those of the nations.
- Webster's Bible (WBS)
- Because for his name's sake they went forth, taking nothing from the Gentiles.
- Young's Literal Translation (YLT)
- because for [His] name they went forth, nothing receiving from the nations;
Read in context
- 5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- 6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- 7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
- 8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- 9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
Cross references
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 2 Kings 5:15–16 2 ಅರಸುಗಳು 5:15–16ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 2 Corinthians 12:13 2 ಕೊರಿಂಥದವರಿಗೆ 12:13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
- 2 Corinthians 11:7–9 2 ಕೊರಿಂಥದವರಿಗೆ 11:7–9ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ? ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 1 Corinthians 9:18 1 ಕೊರಿಂಥದವರಿಗೆ 9:18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- Acts 9:16 ಅಪೊಸ್ತಲರ ಕೃತ್ಯಗಳು 9:16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 1 Corinthians 9:12–15 1 ಕೊರಿಂಥದವರಿಗೆ 9:12–15ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- Acts 8:4 ಅಪೊಸ್ತಲರ ಕೃತ್ಯಗಳು 8:4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- 2 Kings 5:20–27 2 ಅರಸುಗಳು 5:20–27ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು. ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.