Acts · chapter 10 · verse 14
Acts 10:14 in Kannada
ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
Adakke petranu--kartane, haagalla, naanendoo holeyaada padaarthavannaagalee ashuddha padaa rthavannaagalee tindavanalla andanu.
Acts 10:14 in English
- King James Version (KJV)
- But Peter said, Not so, Lord; for I have never eaten any thing that is common or unclean.
- World English Bible (WEB)
- But Peter said, “Not so, Lord; for I have never eaten anything that is common or unclean.”
- American Standard Version (ASV)
- But Peter said, Not so, Lord; for I have never eaten anything that is common and unclean.
- Bible in Basic English (BBE)
- But Peter said, No, Lord; for I have never taken food which is common or unclean.
- Darby Translation (DBY)
- And Peter said, In no wise, Lord; for I have never eaten anything common or unclean.
- Webster's Bible (WBS)
- But Peter said, Not so, Lord; for I have never eaten any thing that is common or unclean.
- Young's Literal Translation (YLT)
- And Peter said, 'Not so, Lord; because at no time did I eat anything common or unclean;'
Read in context
- 12ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
- 13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
- 14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- 15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- 16ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
Cross references
- Leviticus 20:25 ಯಾಜಕಕಾಂಡ 20:25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
- Ezekiel 4:14 ಯೆಹೆಜ್ಕೇಲನು 4:14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- Deuteronomy 14:1–29 ಧರ್ಮೋಪದೇಶಕಾಂಡ 14:1–29ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ. ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: ಎತ್ತು, ಕುರಿ, ಮೇಕೆ, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ, ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು ಜಾತ್ಯಾನುಸಾರವಾದ ಸಕಲ ಕಾಗೆಯೂ ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ. ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು. ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Leviticus 11:1–25 ಯಾಜಕಕಾಂಡ 11:1–25ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ. ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು. ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ, ರಣಹದ್ದು, ಅದರ ಜಾತಿಯ ಹದ್ದು; ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ, ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ; ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು, ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ. ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು. ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು. ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು. ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Daniel 1:8 ದಾನಿಯೇಲನು 1:8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- Matthew 25:9 ಮತ್ತಾಯನು 25:9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
- Luke 1:60 ಲೂಕನು 1:60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
- Exodus 10:11 ವಿಮೋಚನಕಾಂಡ 10:11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
- Ezekiel 44:31 ಯೆಹೆಜ್ಕೇಲನು 44:31ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Matthew 16:22 ಮತ್ತಾಯನು 16:22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Acts 9:5 ಅಪೊಸ್ತಲರ ಕೃತ್ಯಗಳು 9:5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.