Acts · chapter 10 · verse 40
Acts 10:40 in Kannada
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
Devaru aatanannu mooraneya dinadalli ebbisi bahirangavaagi torpadisidanu.
Acts 10:40 in English
- King James Version (KJV)
- Him God raised up the third day, and shewed him openly;
- World English Bible (WEB)
- God raised him up the third day and gave him to be revealed,
- American Standard Version (ASV)
- Him God raised up the third day, and gave him to be made manifest,
- Bible in Basic English (BBE)
- On the third day God gave him back to life, and let him be seen,
- Darby Translation (DBY)
- This [man] God raised up the third day and gave him to be openly seen,
- Webster's Bible (WBS)
- Him God raised the third day, and showed him openly;
- Young's Literal Translation (YLT)
- 'This one God did raise up the third day, and gave him to become manifest,
Read in context
- 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- 39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
- 40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
- 41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- 42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
Cross references
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Acts 13:30–31 ಅಪೊಸ್ತಲರ ಕೃತ್ಯಗಳು 13:30–31ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- 2 Corinthians 4:14 2 ಕೊರಿಂಥದವರಿಗೆ 4:14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
- Matthew 28:1–2 ಮತ್ತಾಯನು 28:1–2ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Romans 4:24–25 ರೋಮಾಪುರದವರಿಗೆ 4:24–25ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- 1 Corinthians 15:12–20 1 ಕೊರಿಂಥದವರಿಗೆ 15:12–20ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- Romans 6:4–11 ರೋಮಾಪುರದವರಿಗೆ 6:4–11ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು. ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ. ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ. ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ. ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು