Acts · chapter 10 · verse 9
Acts 10:9 in Kannada
ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
Marudina avaru prayaanamaadi aa oorina hattirakke baruttiruvaaga petranu sumaaru aarane taasinalli (hanneradu ghantege) praarthane maadu vadakkaagi maaligeyannu hattidanu.
Acts 10:9 in English
- King James Version (KJV)
- On the morrow, as they went on their journey, and drew nigh unto the city, Peter went up upon the housetop to pray about the sixth hour:
- World English Bible (WEB)
- Now on the next day as they were on their journey and got close to the city, Peter went up on the housetop to pray at about noon.
- American Standard Version (ASV)
- Now on the morrow, as they were on their journey, and drew nigh unto the city, Peter went up upon the housetop to pray, about the sixth hour:
- Bible in Basic English (BBE)
- Now the day after, when they were on their journey and were near the town, Peter went up to the top of the house for prayer, about the sixth hour:
- Darby Translation (DBY)
- And on the morrow, as these were journeying and drawing near to the city, Peter went up on the house to pray, about the sixth hour.
- Webster's Bible (WBS)
- On the morrow, as they were going on their journey, and drew nigh to the city, Peter went up upon the house-top to pray, about the sixth hour:
- Young's Literal Translation (YLT)
- And on the morrow, as these are proceeding on the way, and are drawing nigh to the city, Peter went up upon the house-top to pray, about the sixth hour,
Read in context
- 7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
- 8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
- 9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- 10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
- 11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
Cross references
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Psalm 55:17 ಕೀರ್ತನೆಗಳು 55:17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Acts 10:8–32 ಅಪೊಸ್ತಲರ ಕೃತ್ಯಗಳು 10:8–32ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
- Jeremiah 19:13 ಯೆರೆಮೀಯ 19:13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- Jeremiah 32:29 ಯೆರೆಮೀಯ 32:29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Acts 6:4 ಅಪೊಸ್ತಲರ ಕೃತ್ಯಗಳು 6:4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- Acts 11:5–14 ಅಪೊಸ್ತಲರ ಕೃತ್ಯಗಳು 11:5–14ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು. ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು. ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು. ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು; ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು. ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು. ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು. ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು; ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
- 1 Samuel 9:25 1 ಸಮುವೇಲನು 9:25ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
- Matthew 24:17 ಮತ್ತಾಯನು 24:17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
Original words (Greek)
- On · G1161δέ dé
- morrow · G1887ἐπαύριον epaúrion
- as · G1565ἐκεῖνος ekeînos
- journey · G3596ὁδοιπορέω hodoiporéō
- and · G2532καί kaí
- nigh · G1448ἐγγίζω engízō
- city · G4172πόλις pólis
- Peter · G4074Πέτρος Pétros
- up · G305ἀναβαίνω anabaínō
- upon · G1909ἐπί epí
- housetop · G1430δῶμα dōma
- pray · G4336προσεύχομαι proseúchomai
- about · G4012περί perí
- sixth · G1623ἕκτος héktos
- hour · G5610ὥρα hṓra