Acts · chapter 11 · verse 5
Acts 11:5 in Kannada
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
Naanu yoppa pattanadalli praarthane maadutti ddaaga paravashanaagidda nanage ondu darshana vaayitu; adenandare, aakaashadinda naalku moolegalinda dodda joligeyantiruva ondu paatreyu ilisalpattu nanna balige bantu.
Acts 11:5 in English
- King James Version (KJV)
- I was in the city of Joppa praying: and in a trance I saw a vision, A certain vessel descend, as it had been a great sheet, let down from heaven by four corners; and it came even to me:
- World English Bible (WEB)
- “I was in the city of Joppa praying, and in a trance I saw a vision: a certain container descending, like it was a great sheet let down from heaven by four corners. It came as far as me.
- American Standard Version (ASV)
- I was in the city of Joppa praying: and in a trance I saw a vision, a certain vessel descending, as it were a great sheet let down from heaven by four corners; and it came even unto me:
- Bible in Basic English (BBE)
- I was in the town of Joppa, at prayer: and falling into a deep sleep, I saw in a vision a vessel like a great cloth let down from heaven, and it came down to me:
- Darby Translation (DBY)
- I was in the city of Joppa praying, and in an ecstasy I saw a vision, a certain vessel descending like a great sheet, let down by four corners out of heaven, and it came even to me:
- Webster's Bible (WBS)
- I was in the city of Joppa praying: and in a trance I saw a vision, A certain vessel descend, as it had been a great sheet, let down from heaven by four corners; and it came even to me:
- Young's Literal Translation (YLT)
- 'I was in the city of Joppa praying, and I saw in a trance a vision, a certain vessel coming down, as a great sheet by four corners being let down out of the heaven, and it came unto me;
Read in context
- 3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- 4ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
- 5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
- 6ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
- 7ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
Cross references
- Acts 10:9–32 ಅಪೊಸ್ತಲರ ಕೃತ್ಯಗಳು 10:9–32ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
- Amos 8:2 ಆಮೋಸ 8:2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- Acts 9:10 ಅಪೊಸ್ತಲರ ಕೃತ್ಯಗಳು 9:10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- Amos 7:4–7 ಆಮೋಸ 7:4–7ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು. ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು. ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ. ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
- Ezekiel 2:9 ಯೆಹೆಜ್ಕೇಲನು 2:9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- Jeremiah 1:11–14 ಯೆರೆಮೀಯ 1:11–14ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
- Acts 11:5–14 ಅಪೊಸ್ತಲರ ಕೃತ್ಯಗಳು 11:5–14ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು. ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು. ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು. ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು; ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು. ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು. ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು. ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು; ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
- Acts 22:17 ಅಪೊಸ್ತಲರ ಕೃತ್ಯಗಳು 22:17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- 2 Corinthians 12:1–3 2 ಕೊರಿಂಥದವರಿಗೆ 12:1–3ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
Original words (Greek)
- I · G1473ἐγώ egṓ
- was · G2252ἤμην ḗmēn
- in · G1722ἐν en
- city · G4172πόλις pólis
- Joppa · G2445Ἰόππη Ióppē
- praying · G4336προσεύχομαι proseúchomai
- and · G2532καί kaí
- in · G1722ἐν en
- trance · G1611ἔκστασις ékstasis
- saw · G1492εἴδω eídō
- vision · G3705ὅραμα hórama
- certain · G5100τὶς tìs
- vessel · G4632σκεῦος skeûos
- descend · G2597καταβαίνω katabaínō
- been · G5613ὡς hōs
- great · G3173μέγας mégas
- sheet · G3607ὀθόνη othónē
- down · G2524καθίημι kathíēmi
- from · G1537ἐκ ek
- heaven · G3772οὐρανός ouranós
- four · G5064τέσσαρες téssares
- corners · G746ἀρχή archḗ
- and · G2532καί kaí
- came · G2064ἔρχομαι érchomai
- to · G891ἄχρι áchri
- me · G1700ἐμοῦ emoû