Acts · chapter 13 · verse 18
Acts 13:18 in Kannada
ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
Aatanu sumaaru naalvattu varushagala varegoo adaviyalli avara nadaavaliyannu sahisi kondu
Acts 13:18 in English
- King James Version (KJV)
- And about the time of forty years suffered he their manners in the wilderness.
- World English Bible (WEB)
- For a period of about forty years he put up with them in the wilderness.
- American Standard Version (ASV)
- And for about the time of forty years as a nursing-father bare he them in the wilderness.
- Bible in Basic English (BBE)
- And for about forty years he put up with their ways in the waste land.
- Darby Translation (DBY)
- and for a time of about forty years he nursed them in the desert.
- Webster's Bible (WBS)
- And about the time of forty years he suffered their manners in the wilderness.
- Young's Literal Translation (YLT)
- and about a period of forty years He did suffer their manners in the wilderness,
Read in context
- 16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- 17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- 18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
- 19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- 20ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
Cross references
- Acts 7:36 ಅಪೊಸ್ತಲರ ಕೃತ್ಯಗಳು 7:36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- Psalm 95:8–11 ಕೀರ್ತನೆಗಳು 95:8–11ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Amos 5:25–26 ಆಮೋಸ 5:25–26ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ? ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Nehemiah 9:16–21 ನೆಹೆಮೀಯ 9:16–21ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು. ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ. ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ. ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ. ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Numbers 14:33–34 ಅರಣ್ಯಕಾಂಡ 14:33–34ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- Exodus 16:35 ವಿಮೋಚನಕಾಂಡ 16:35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Hebrews 3:7–10 ಇಬ್ರಿಯರಿಗೆ 3:7–10ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- Deuteronomy 1:31 ಧರ್ಮೋಪದೇಶಕಾಂಡ 1:31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
- Hebrews 3:16–19 ಇಬ್ರಿಯರಿಗೆ 3:16–19ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Acts 7:39–43 ಅಪೊಸ್ತಲರ ಕೃತ್ಯಗಳು 7:39–43ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು. ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು. ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- Exodus 16:2 ವಿಮೋಚನಕಾಂಡ 16:2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.