Acts · chapter 13 · verse 28
Acts 13:28 in Kannada
ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
Maranadandanege kaaranavenoo tamage sikkadiddaroo aatanannu kollisabekendu pilaatanannu kelikondaru.
Acts 13:28 in English
- King James Version (KJV)
- And though they found no cause of death [in him], yet desired they Pilate that he should be slain.
- World English Bible (WEB)
- Though they found no cause for death, they still asked Pilate to have him killed.
- American Standard Version (ASV)
- And though they found no cause of death [in him], yet asked they of Pilate that he should be slain.
- Bible in Basic English (BBE)
- And though no cause of death was seen in him, they made a request to Pilate that he might be put to death.
- Darby Translation (DBY)
- And having found no cause of death [in him], they begged of Pilate that he might be slain.
- Webster's Bible (WBS)
- And though they found no cause of death [in him] , yet they desired Pilate that he should be put to death.
- Young's Literal Translation (YLT)
- and no cause of death having found, they did ask of Pilate that he should be slain,
Read in context
- 26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- 27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- 28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
- 29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- 30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
Cross references
- Matthew 27:22–25 ಮತ್ತಾಯನು 27:22–25ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Luke 23:14–16 ಲೂಕನು 23:14–16ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ. ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
- John 19:4 ಯೋಹಾನನು 19:4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- Luke 23:21–25 ಲೂಕನು 23:21–25ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Mark 15:13–15 ಮಾರ್ಕನು 15:13–15ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Luke 23:4–5 ಲೂಕನು 23:4–5ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 3:13–14 ಅಪೊಸ್ತಲರ ಕೃತ್ಯಗಳು 3:13–14ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- John 18:38 ಯೋಹಾನನು 18:38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- John 19:12–16 ಯೋಹಾನನು 19:12–16ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು. ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು. ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.