Acts · chapter 14 · verse 6
Acts 14:6 in Kannada
ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
Apostalaru adannu tilidu lukavonyadallidda lustra derbe emba oorugaligoo avugala suttaliruva seemegoo odihogi
Acts 14:6 in English
- King James Version (KJV)
- They were ware of [it], and fled unto Lystra and Derbe, cities of Lycaonia, and unto the region that lieth round about:
- World English Bible (WEB)
- they became aware of it and fled to the cities of Lycaonia, Lystra, Derbe, and the surrounding region.
- American Standard Version (ASV)
- they became aware of it, and fled unto the cities of Lycaonia, Lystra and Derbe, and the region round about:
- Bible in Basic English (BBE)
- Having got news of it, they went in flight to the towns of Lycaonia, Lystra, and Derbe, and the country round about:
- Darby Translation (DBY)
- they, being aware of it, fled to the cities of Lycaonia, Lystra and Derbe, and the surrounding country,
- Webster's Bible (WBS)
- Being apprised of [it] , they fled to Lystra and Derbe, cities of Lycaonia, and to the region in that vicinity.
- Young's Literal Translation (YLT)
- they having become aware, did flee to the cities of Lycaonia, Lystra, and Derbe, and to the region round about,
Read in context
- 4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- 5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
- 6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- 7ಅಲ್ಲಿ ಸುವಾರ್ತೆಯನ್ನು ಸಾರಿದರು.
- 8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
Cross references
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 14:20–21 ಅಪೊಸ್ತಲರ ಕೃತ್ಯಗಳು 14:20–21ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು. ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- Acts 17:13–14 ಅಪೊಸ್ತಲರ ಕೃತ್ಯಗಳು 17:13–14ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು. ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- Acts 16:1–2 ಅಪೊಸ್ತಲರ ಕೃತ್ಯಗಳು 16:1–2ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು. ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
- Acts 23:12–22 ಅಪೊಸ್ತಲರ ಕೃತ್ಯಗಳು 23:12–22ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
- 2 Kings 6:8–12 2 ಅರಸುಗಳು 6:8–12ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು. ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು. ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ. ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು. ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;