Acts · chapter 16 · verse 22
Acts 16:22 in Kannada
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
Samoohavu ottaagi koodi avarige virodhavaagi eddaaga nyaayaadhipatigalu avara vastragalannu haridu avarannu hodeyuvante appanekottaru.
Acts 16:22 in English
- King James Version (KJV)
- And the multitude rose up together against them: and the magistrates rent off their clothes, and commanded to beat [them].
- World English Bible (WEB)
- The multitude rose up together against them and the magistrates tore their clothes from them, then commanded them to be beaten with rods.
- American Standard Version (ASV)
- And the multitude rose up together against them: and the magistrates rent their garments off them, and commanded to beat them with rods.
- Bible in Basic English (BBE)
- And the people made an attack on them all together: and the authorities took their clothing off them, and gave orders for them to be whipped.
- Darby Translation (DBY)
- And the crowd rose up too against them; and the praetors, having torn off their clothes, commanded to scourge [them].
- Webster's Bible (WBS)
- And the multitude rose together against them: and the magistrates rent off their clothes, and commanded to beat [them] .
- Young's Literal Translation (YLT)
- And the multitude rose up together against them, and the magistrates having torn their garments from them, were commanding to beat [them] with rods,
Read in context
- 20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- 21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- 22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
- 23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- 24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
Cross references
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- 2 Corinthians 6:5 2 ಕೊರಿಂಥದವರಿಗೆ 6:5ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- Acts 22:22–26 ಅಪೊಸ್ತಲರ ಕೃತ್ಯಗಳು 22:22–26ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು; ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- 2 Corinthians 11:23–25 2 ಕೊರಿಂಥದವರಿಗೆ 11:23–25ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
- Matthew 27:26 ಮತ್ತಾಯನು 27:26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Acts 21:30–31 ಅಪೊಸ್ತಲರ ಕೃತ್ಯಗಳು 21:30–31ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- Acts 19:28–41 ಅಪೊಸ್ತಲರ ಕೃತ್ಯಗಳು 19:28–41ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು. ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು. ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು. ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ. ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು. ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು. ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು? ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು. ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ. ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ. ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು. ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು. ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Matthew 10:17 ಮತ್ತಾಯನು 10:17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Acts 16:37 ಅಪೊಸ್ತಲರ ಕೃತ್ಯಗಳು 16:37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Original words (Greek)
- And · G2532καί kaí
- multitude · G3793ὄχλος óchlos
- together · G4911συνεφίστημι synephístēmi
- against · G2596κατά katá
- them · G846αὐτός autós
- and · G2532καί kaí
- magistrates · G4755στρατηγός stratēgós
- off · G4048περιῤῥήγνυμι perirrhḗgnymi
- their · G846αὐτός autós
- clothes · G2440ἱμάτιον himátion
- commanded · G2753κελεύω keleúō
- beat · G4463ῥαβδίζω rhabdízō