Acts · chapter 17 · verse 29
Acts 17:29 in Kannada
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
Naavu devara santaanadava raagidda mele daivatvavu manushyana shilpa vidye yindaloo kalpaneyindaloo kettiruva chinna belli kallige samaanavendu naavu bhaavisalebaaradu.
Acts 17:29 in English
- King James Version (KJV)
- Forasmuch then as we are the offspring of God, we ought not to think that the Godhead is like unto gold, or silver, or stone, graven by art and man’s device.
- World English Bible (WEB)
- Being then the offspring of God, we ought not to think that the Divine Nature is like gold, or silver, or stone, engraved by art and design of man.
- American Standard Version (ASV)
- Being then the offspring of God, we ought not to think that the Godhead is like unto gold, or silver, or stone, graven by art and device of man.
- Bible in Basic English (BBE)
- If then we are the offspring of God, it is not right for us to have the idea that God is like gold or silver or stone, formed by the art or design of man.
- Darby Translation (DBY)
- Being therefore [the] offspring of God, we ought not to think that which is divine to be like gold or silver or stone, [the] graven form of man's art and imagination.
- Webster's Bible (WBS)
- Being then the offspring of God, we ought not to think that the Godhead is like to gold, or silver, or stone graven by art and man's device.
- Young's Literal Translation (YLT)
- 'Being, therefore, offspring of God, we ought not to think the Godhead to be like to gold, or silver, or stone, graving of art and device of man;
Read in context
- 27ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
- 28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- 30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- 31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
Cross references
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Isaiah 46:5–6 ಯೆಶಾಯ 46:5–6ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Habakkuk 2:19–20 ಹಬಕ್ಕೂಕ 2:19–20ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Jeremiah 10:4–10 ಯೆರೆಮೀಯ 10:4–10ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Romans 1:20–23 ರೋಮಾಪುರದವರಿಗೆ 1:20–23ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Psalm 106:20 ಕೀರ್ತನೆಗಳು 106:20ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- Isaiah 44:9–20 ಯೆಶಾಯ 44:9–20ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Psalm 94:7–9 ಕೀರ್ತನೆಗಳು 94:7–9ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- Isaiah 40:12–20 ಯೆಶಾಯ 40:12–20ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
Original words (Greek)
- then · G3767οὖν oûn
- are · G5225ὑπάρχω hypárchō
- offspring · G1085γένος génos
- God · G2316θεός theós
- ought · G3784ὀφείλω opheílō
- not · G3756οὐ ou
- that · G3543νομίζω nomízō
- Godhead · G2304θεῖος theîos
- is · G1511εἶναι eînai
- unto · G3664ὅμοιος hómoios
- gold · G5557χρυσός chrysós
- or · G2228ἤ ḗ
- silver · G696ἄργυρος árgyros
- or · G2228ἤ ḗ
- stone · G3037λίθος líthos
- graven · G5480χάραγμα cháragma
- art · G5078τέχνη téchnē
- and · G2532καί kaí
- man’s · G444ἄνθρωπος ánthrōpos
- device · G1761ἐνθύμησις enthýmēsis