Acts · chapter 18 · verse 9
Acts 18:9 in Kannada
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
Idallade kartanu raatriyalli paulanige darshana kottu--neenu hedarabeda; summanirade maata naaduttale iru.
Acts 18:9 in English
- King James Version (KJV)
- Then spake the Lord to Paul in the night by a vision, Be not afraid, but speak, and hold not thy peace:
- World English Bible (WEB)
- The Lord said to Paul in the night by a vision, “Don’t be afraid, but speak and don’t be silent;
- American Standard Version (ASV)
- And the Lord said unto Paul in the night by a vision, Be not afraid, but speak and hold not thy peace:
- Bible in Basic English (BBE)
- And the Lord said to Paul in the night, in a vision, Have no fear and go on preaching:
- Darby Translation (DBY)
- And the Lord said by vision in [the] night to Paul, Fear not, but speak and be not silent;
- Webster's Bible (WBS)
- Then the Lord spoke to Paul in the night by a vision, Be not afraid, but speak, and hold not thy peace:
- Young's Literal Translation (YLT)
- And the Lord said through a vision in the night to Paul, 'Be not afraid, but be speaking and thou mayest be not silent;
Read in context
- 7ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
- 8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- 9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
- 10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- 11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
Cross references
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Ephesians 6:19–20 ಎಫೆಸದವರಿಗೆ 6:19–20ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Ezekiel 2:6–8 ಯೆಹೆಜ್ಕೇಲನು 2:6–8ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Acts 27:23–25 ಅಪೊಸ್ತಲರ ಕೃತ್ಯಗಳು 27:23–25ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- Acts 16:9 ಅಪೊಸ್ತಲರ ಕೃತ್ಯಗಳು 16:9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 2 Corinthians 12:1–3 2 ಕೊರಿಂಥದವರಿಗೆ 12:1–3ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- Micah 3:8 ಮೀಕ 3:8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- Jonah 3:2 ಯೋನ 3:2ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Ezekiel 3:9–11 ಯೆಹೆಜ್ಕೇಲನು 3:9–11ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ. ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.