Acts · chapter 19 · verse 4
Acts 19:4 in Kannada
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
Aaga paulanu--nijavaagiyoo yohaananu tanna hinde baruvaata nannu andare krista yesuvannu nambabekendu janarige heli maanasaantarada baaptismadinda baaptisma maadisidanu endu helidanu.
Acts 19:4 in English
- King James Version (KJV)
- Then said Paul, John verily baptized with the baptism of repentance, saying unto the people, that they should believe on him which should come after him, that is, on Christ Jesus.
- World English Bible (WEB)
- Paul said, “John indeed baptized with the baptism of repentance, saying to the people that they should believe in the one who would come after him, that is, in Christ Jesus.”
- American Standard Version (ASV)
- And Paul said, John baptized with the baptism of repentance, saying unto the people that they should believe on him that should come after him, that is, on Jesus.
- Bible in Basic English (BBE)
- And Paul said, John gave a baptism which goes with a change of heart, saying to the people that they were to have faith in him who was coming after him, that is, in Jesus.
- Darby Translation (DBY)
- And Paul said, John indeed baptised [with] the baptism of repentance, saying to the people that they should believe on him that was coming after him, that is, on Jesus.
- Webster's Bible (WBS)
- Then said Paul, John verily baptized with the baptism of repentance, saying to the people, That they should believe on him who should come after him, that is, on Christ Jesus.
- Young's Literal Translation (YLT)
- And Paul said, 'John, indeed, did baptize with a baptism of reformation, saying to the people that in him who is coming after him they should believe — that is, in the Christ — Jesus;'
Read in context
- 2ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
- 3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- 4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- 6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
Cross references
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- Acts 11:16 ಅಪೊಸ್ತಲರ ಕೃತ್ಯಗಳು 11:16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- John 1:29–34 ಯೋಹಾನನು 1:29–34ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- Luke 3:16–18 ಲೂಕನು 3:16–18ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು. ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- John 3:28–36 ಯೋಹಾನನು 3:28–36ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 1:27 ಯೋಹಾನನು 1:27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Acts 13:23–25 ಅಪೊಸ್ತಲರ ಕೃತ್ಯಗಳು 13:23–25ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ. ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Matthew 3:11–12 ಮತ್ತಾಯನು 3:11–12ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Matthew 21:25–32 ಮತ್ತಾಯನು 21:25–32ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- John 1:15 ಯೋಹಾನನು 1:15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
- Mark 1:1–12 ಮಾರ್ಕನು 1:1–12ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು. ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು. ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು. ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು. ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು. ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು. ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು. ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
Original words (Greek)
- Then · G1161δέ dé
- said · G2036ἔπω épō
- Paul · G3972Παῦλος Paûlos
- John · G2491Ἰωάννης Iōánnēs
- verily · G3303μέν mén
- baptized · G907βαπτίζω baptízō
- baptism · G908βάπτισμα báptisma
- repentance · G3341μετάνοια metánoia
- saying · G3004λέγω légō
- people · G2992λαός laós
- that · G2443ἵνα hína
- believe · G4100πιστεύω pisteúō
- on · G1519εἰς eis
- which · G3588ὁ ho
- come · G2064ἔρχομαι érchomai
- after · G3326μετά metá
- him · G846αὐτός autós
- that · G5124τοῦτο toûto
- is · G2076ἐστί estí
- on · G1519εἰς eis
- Christ · G5547Χριστός Christós
- Jesus · G2424Ἰησοῦς Iēsoûs