Acts · chapter 2 · verse 1
Acts 2:1 in Kannada
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
Panchaashattama dinavu poornavaagi bandaaga avarellaroo onde manassi ninda onde sthaladalli iddaru.
Acts 2:1 in English
- King James Version (KJV)
- And when the day of Pentecost was fully come, they were all with one accord in one place.
- World English Bible (WEB)
- Now when the day of Pentecost had come, they were all with one accord in one place.
- American Standard Version (ASV)
- And when the day of Pentecost was now come, they were all together in one place.
- Bible in Basic English (BBE)
- And when the day of Pentecost was come, they were all together in one place.
- Darby Translation (DBY)
- And when the day of Pentecost was now accomplishing, they were all together in one place.
- Webster's Bible (WBS)
- And when the day of Pentecost was fully come, they were all with one accord in one place.
- Young's Literal Translation (YLT)
- And in the day of the Pentecost being fulfilled, they were all with one accord at the same place,
Read in context
- 1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- 2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
- 3ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
Cross references
- Romans 15:6 ರೋಮಾಪುರದವರಿಗೆ 15:6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- Philippians 2:2 ಫಿಲಿಪ್ಪಿಯವರಿಗೆ 2:2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- Acts 1:13–15 ಅಪೊಸ್ತಲರ ಕೃತ್ಯಗಳು 1:13–15ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು. ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- 1 Corinthians 16:8 1 ಕೊರಿಂಥದವರಿಗೆ 16:8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Leviticus 23:15–21 ಯಾಜಕಕಾಂಡ 23:15–21ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- Acts 4:24 ಅಪೊಸ್ತಲರ ಕೃತ್ಯಗಳು 4:24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.