Acts · chapter 20 · verse 35
Acts 20:35 in Kannada
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
Neevu haageye kelasamaadi balaheena rige heege aadhaaravaagiratakkaddendoo mattu--tegedukolluvadakkinta koduvade hechchina bhaagya vendu kartanaada yesu helida maatugalannu neevu jnyaapaka maadikollabekendoo ivellavu galannu naanu nimage tiliyapadisiddene.
Acts 20:35 in English
- King James Version (KJV)
- I have shewed you all things, how that so labouring ye ought to support the weak, and to remember the words of the Lord Jesus, how he said, It is more blessed to give than to receive.
- World English Bible (WEB)
- In all things I gave you an example, that so laboring you ought to help the weak, and to remember the words of the Lord Jesus, that he himself said, ‘It is more blessed to give than to receive.’ ”
- American Standard Version (ASV)
- In all things I gave you an example, that so laboring ye ought to help the weak, and to remember the words of the Lord Jesus, that he himself said, It is more blessed to give than to receive.
- Bible in Basic English (BBE)
- In all things I was an example to you of how, in your lives, you are to give help to the feeble, and keep in memory the words of the Lord Jesus, how he himself said, There is a greater blessing in giving than in getting.
- Darby Translation (DBY)
- I have shewed you all things, that thus labouring [we] ought to come in aid of the weak, and to remember the words of the Lord Jesus, that he himself said, It is more blessed to give than to receive.
- Webster's Bible (WBS)
- I have shown you all things, that so laboring ye ought to support the weak, and to remember the words of the Lord Jesus, that he said, It is more blessed to give than to receive.
- Young's Literal Translation (YLT)
- all things I did shew you, that, thus labouring, it behoveth [us] to partake with the ailing, to be mindful also of the words of the Lord Jesus, that he himself said, It is more blessed to give than to receive.'
Read in context
- 33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
- 34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- 35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
- 37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 2 Corinthians 9:6–12 2 ಕೊರಿಂಥದವರಿಗೆ 9:6–12ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- Luke 14:12–14 ಲೂಕನು 14:12–14ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- Matthew 10:8 ಮತ್ತಾಯನು 10:8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Isaiah 58:7–12 ಯೆಶಾಯ 58:7–12ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- Philippians 4:17–20 ಫಿಲಿಪ್ಪಿಯವರಿಗೆ 4:17–20ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು. ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
- Psalm 112:5–9 ಕೀರ್ತನೆಗಳು 112:5–9ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು. ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
Original words (Greek)
- shewed · G5263ὑποδείκνυμι hypodeíknymi
- you · G5213ὑμῖν hymîn
- things · G3956πᾶς pâs
- that · G3754ὅτι hóti
- so · G3779οὕτω hoútō
- labouring · G2872κοπιάω kopiáō
- ought · G1163δεῖ deî
- support · G482ἀντιλαμβάνομαι antilambánomai
- weak · G770ἀσθενέω asthenéō
- and · G5037τέ té
- remember · G3421μνημονεύω mnēmoneúō
- words · G3056λόγος lógos
- Lord · G2962κύριος kýrios
- Jesus · G2424Ἰησοῦς Iēsoûs
- how · G3754ὅτι hóti
- he · G846αὐτός autós
- said · G2036ἔπω épō