Acts · chapter 21 · verse 28
Acts 21:28 in Kannada
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
Israayel janare, sahaaya maadiri; ellaa kadeyalli janarigoo ee nyaaya pramaanakkoo ee sthalakkoo virodhavaagi ellarigoo bodhisuttiddavanu ee manushyane; idallade greekarannu saha ee devaalayadolage karedu kondu bandu ee parishuddhasthalavannu hole maadiddaane endu koogi
Acts 21:28 in English
- King James Version (KJV)
- Crying out, Men of Israel, help: This is the man, that teacheth all [men] every where against the people, and the law, and this place: and further brought Greeks also into the temple, and hath polluted this holy place.
- World English Bible (WEB)
- crying out, “Men of Israel, help! This is the man who teaches all men everywhere against the people, and the law, and this place. Moreover, he also brought Greeks into the temple and has defiled this holy place!”
- American Standard Version (ASV)
- crying out, Men of Israel, help: This is the man that teacheth all men everywhere against the people, and the law, and this place; and moreover he brought Greeks also into the temple, and hath defiled this holy place.
- Bible in Basic English (BBE)
- Crying out, Men of Israel, come to our help: this is the man who is teaching all men everywhere against the people and the law and this place: and in addition, he has taken Greeks into the Temple, and made this holy place unclean.
- Darby Translation (DBY)
- crying, Israelites, help! this is the man who teaches all everywhere against the people, and the law, and this place, and has brought Greeks too into the temple, and profaned this holy place.
- Webster's Bible (WBS)
- Crying out, Men of Israel, help. This is the man that teacheth all [men] every where against the people, and the law, and this place: and further, hath brought Greeks also into the temple; and hath polluted this holy place.
- Young's Literal Translation (YLT)
- crying out, 'Men, Israelites, help! this is the man who, against the people, and the law, and this place, all everywhere is teaching; and further, also, Greeks he brought into the temple, and hath defiled this holy place;'
Read in context
- 26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
- 27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- 28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- 29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
- 30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
Cross references
- Acts 24:5–6 ಅಪೊಸ್ತಲರ ಕೃತ್ಯಗಳು 24:5–6ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Acts 21:21 ಅಪೊಸ್ತಲರ ಕೃತ್ಯಗಳು 21:21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- Acts 26:20–21 ಅಪೊಸ್ತಲರ ಕೃತ್ಯಗಳು 26:20–21ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು. ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Acts 24:18 ಅಪೊಸ್ತಲರ ಕೃತ್ಯಗಳು 24:18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Acts 19:26–28 ಅಪೊಸ್ತಲರ ಕೃತ್ಯಗಳು 19:26–28ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು. ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
- Jeremiah 7:4–15 ಯೆರೆಮೀಯ 7:4–15ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು. ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
Original words (Greek)
- out · G2896κράζω krázō
- Men · G435ἀνήρ anḗr
- Israel · G2475Ἰσραηλίτης Israēlítēs
- help · G997βοηθέω boēthéō
- This · G3778οὗτος hoûtos
- is · G2076ἐστί estí
- man · G444ἄνθρωπος ánthrōpos
- teacheth · G1321διδάσκω didáskō
- all · G3956πᾶς pâs
- where · G3837πανταχοῦ pantachoû
- against · G2596κατά katá
- people · G2992λαός laós
- and · G2532καί kaí
- law · G3551νόμος nómos
- and · G2532καί kaí
- this · G5127τούτου toútou
- place · G5117τόπος tópos
- and · G5037τέ té
- further · G2089ἔτι éti
- brought · G1521εἰσάγω eiságō
- Greeks · G1672Ἕλλην Héllēn
- also · G2532καί kaí
- into · G1519εἰς eis
- temple · G2411ἱερόν hierón
- and · G2532καί kaí
- polluted · G2840κοινόω koinóō
- this · G5126τοῦτον toûton
- holy · G40ἅγιος hágios
- place · G5117τόπος tópos