Acts · chapter 24 · verse 15
Acts 24:15 in Kannada
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
Sattuhoda neetivantarigoo aneetivantarigoo punarutthaanavu iruvadendu naanu devara kadege nireekshe ittiddene. Adakke ivaru saha oppi kolluttaare.
Acts 24:15 in English
- King James Version (KJV)
- And have hope toward God, which they themselves also allow, that there shall be a resurrection of the dead, both of the just and unjust.
- World English Bible (WEB)
- having hope toward God, which these also themselves look for, that there will be a resurrection of the dead, both of the just and unjust.
- American Standard Version (ASV)
- having hope toward God, which these also themselves look for, that there shall be a resurrection both of the just and unjust.
- Bible in Basic English (BBE)
- Hoping in God for that which they themselves are looking for, that there will be a coming back from the dead for upright men and wrongdoers.
- Darby Translation (DBY)
- having hope towards God, which they themselves also receive, that there is to be a resurrection both of just and unjust.
- Webster's Bible (WBS)
- And have hope towards God, which they themselves also allow, that there will be a resurrection of the dead, both of the just and unjust.
- Young's Literal Translation (YLT)
- having hope toward God, which they themselves also wait for, [that] there is about to be a rising again of the dead, both of righteous and unrighteous;
Read in context
- 13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- 14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- 15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- 16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Cross references
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- 1 Thessalonians 4:14–16 1 ಥೆಸಲೊನೀಕದವರಿಗೆ 4:14–16ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Revelation 20:12–13 ಪ್ರಕಟನೆ 20:12–13ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- Job 19:25–26 ಯೋಬನು 19:25–26ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 1 Corinthians 15:12–27 1 ಕೊರಿಂಥದವರಿಗೆ 15:12–27ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು. ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Acts 23:6–8 ಅಪೊಸ್ತಲರ ಕೃತ್ಯಗಳು 23:6–8ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
- Matthew 22:31–32 ಮತ್ತಾಯನು 22:31–32ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ-- ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Acts 28:20–31 ಅಪೊಸ್ತಲರ ಕೃತ್ಯಗಳು 28:20–31ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು. ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ. ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು. ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು. ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು. ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು. ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು. ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ. ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Acts 24:21 ಅಪೊಸ್ತಲರ ಕೃತ್ಯಗಳು 24:21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
Original words (Greek)
- have · G2192ἔχω échō
- hope · G1680ἐλπίς elpís
- toward · G1519εἰς eis
- God · G2316θεός theós
- which · G3739ὅς hós
- they · G846αὐτός autós
- themselves · G3778οὗτος hoûtos
- also · G2532καί kaí
- allow · G4327προσδέχομαι prosdéchomai
- shall · G3195μέλλω méllō
- be · G2071ἔσομαι ésomai
- resurrection · G386ἀνάστασις anástasis
- dead · G3498νεκρός nekrós
- both · G5037τέ té
- just · G1342δίκαιος díkaios
- and · G2532καί kaí
- unjust · G94ἄδικος ádikos